ಶಾಕಿಂಗ್! ಇಬ್ಬರು ಕಾಮುಕರಿಂದ ನರ್ಸ್ ಮೇಲೆ ಅತ್ಯಾಚಾರ

ಗಾಜಿಯಾಬಾದ್, ಶನಿವಾರ, 23 ಸೆಪ್ಟಂಬರ್ 2017 (16:50 IST)

ನರ್ಸ್ ಉದ್ಯೋಗದಲ್ಲಿರುವ ಯುವತಿ ಕೆಲಸ ಮುಗಿಸಿ ರಾತ್ರಿ ಮನೆಗೆ ಮರಳುತ್ತಿರುವ ಸಂದರ್ಭದಲ್ಲಿ ಇಬ್ಬರು ಆರೋಪಗಳು ಆಕೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ.
ನಗರದ ರಾಜ್‌ನಗರ್ ಪ್ರದೇಶದಲ್ಲಿರುವ ಆಸ್ಪತ್ರೆಯಲ್ಲಿ ನರ್ಸ್ ವೃತ್ತಿಯಲ್ಲಿರುವ ಯುವತಿ ಮೇಲೆ ಅತ್ಯಾಚಾರವೆಸಗಿರುವ ಆರೋಪಿಗಳ ವಿರುದ್ಧ ಸಿಹಾನಿ ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಕಳೆದ ರಾತ್ರಿ ನರ್ಸ್ ಮನೆಗೆ ಮರಳುತ್ತಿರುವ ಸಂದರ್ಭದಲ್ಲಿ ಆಕೆಯನ್ನು ಅಡ್ಡಗಟ್ಟಿದ ಇಬ್ಬರು ಕಾಮುಕರು ಆಕೆಯ ಬಳಿಯಿದ್ದ ಚಿನ್ನ ಮತ್ತು ಹಣವನ್ನು ದೋಚಲು ಪ್ರಯತ್ನಿಸಿದ್ದಾರೆ. ಆದರೆ, ಆಕೆ ಪ್ರತಿರೋಧ ತೋರಿದಾಗ ಹತ್ತಿರದಲ್ಲಿರುವ ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರವೆಸಗಿದ ನಂತರ ಆಕೆಯ ಬ್ಯಾಗ್‌, ಮೊಬೈಲ್, ಹಣ ಮತ್ತು ಚಿನ್ನವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಸಿಹಾನಿ ಗೇಟ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಅತ್ಯಾಚಾರ ದೂರು ದಾಖಲಾದ ನಂತರ ಪೊಲೀಸರ ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದು, ಶೀಘ್ರದಲ್ಲಿಯೇ ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿದೆ. ಈ ...

news

ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಡಿವಿಎಸ್ ತಿರುಗೇಟು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರಿಗೆ ಮೀಟರಿಲ್ಲ ಎನ್ನುವ ...

news

ಈಶ್ವರಪ್ಪ ಪಿಎ ಕಿಡ್ನಾಪ್‌ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಅಶ್ಲೀಲ ವಿಡಿಯೋಗಾಗಿ ಅಪಹರಣ ಸಂಚು

ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣಕ್ಕೆ ಹೊಸ ...

news

ದಾವೂದ್ ಇಬ್ರಾಹಿಂ ಜತೆ ಬಿಜೆಪಿ ಮಾಜಿ ಸಚಿವನ ಲಿಂಕ್

ಮುಂಬೈ: ದಾವೂದ್ ಇಬ್ರಾಹಿಂ ಜತೆ ಬಿಜೆಪಿ ಮಾಜಿ ಸಚಿವ ಏಕನಾಥ್ ಖಾಡ್ಸೆ ಲಿಂಕ್ ಹೊಂದಿರುವುದು ಇದೀಗ ...

Widgets Magazine