ಇನ್ಮುಂದೆ 5-8ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್ ಆದರೆ ಮಾತ್ರ ಮುಂದಿನ ತರಗತಿಗೆ ತೇರ್ಗಡೆ-ಕೇಂದ್ರ ಸರ್ಕಾರ

ನವದೆಹಲಿ, ಸೋಮವಾರ, 14 ಜನವರಿ 2019 (12:13 IST)

ನವದೆಹಲಿ : ಒಂದನೇ ತರಗತಿಯಿಂದ ಎಂಟನೇ ತರಗತಿವರೆಗೆ ಮಕ್ಕಳನ್ನು ಫೇಲ್ ಮಾಡಬಾರದು ಎಂಬ 2009ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದ ಶಿಕ್ಷಣ ಹಕ್ಕು ಕಾಯ್ದೆಯಲ್ಲಿ ಹೊಸ ತಿದ್ದುಪಡಿಯನ್ನು ಮಾಡಿದೆ.


ಈ ಮೂಲಕ ಓದದ ಮಕ್ಕಳನ್ನು ಇನ್ಮುಂದೆ ಫೇಲ್ ಮಾಡಬಹುದಾಗಿದೆ. ಹೀಗಾಗಿ ಪ್ರತಿ ವಿದ್ಯಾರ್ಥಿಗಳು ಪಾಸ್ ಆದರೆ ಮಾತ್ರ ಮುಂದಿನ ತರಗತಿಯಲ್ಲಿ ವ್ಯಾಸಂಗ ಮಾಡಬಹುದಾಗಿದೆ. ಈ ಹೊಸ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಹೊಸ ತಿದ್ದು ಪಡಿಗೆ ಕೇಂದ್ರ ಸರ್ಕಾರ ಅಧಿಕೃತ ರಾಜ್ಯ ಪತ್ರ ಹೊರಡಿಸಿದೆ.


2009ರಿಂದ ಕಾಯ್ದೆ ಜಾರಿಗೆ ಬಂದಾಗಿನಿಂದ ದೇಶದಲ್ಲಿ ಶೈಕ್ಷಣಿಕ ಮೌಲ್ಯದ ಮಟ್ಟ ಕುಸಿಯುತ್ತಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ತಿದ್ದುಪಡಿಯನ್ನು ಜಾರಿಗೆ ತಂದಿದೆ. ಹೊಸ ತಿದ್ದುಪಡಿ ಅನ್ವಯ ಇನ್ಮುಂದೆ 5 ಮತ್ತು 8ನೇ ತರಗತಿಯ ಕೊನೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು. ಪರೀಕ್ಷೆಯಲ್ಲಿ ಪಾಸ್ ಆದರೆ ಮಾತ್ರ ಮುಂದಿನ ತರಗತಿಗೆ ತೇರ್ಗಡೆ ಹೊಂದುತ್ತಾರೆ.


ಒಂದು ವೇಳೆ 5-8ನೇ ತರಗತಿಯ ಪರೀಕ್ಷೆಯಲ್ಲಿ ಫೇಲ್ ಆದರೆ ಮುಂದಿನ ಎರಡು ತಿಂಗಳಲ್ಲಿ ಮರು ಪರೀಕ್ಷೆಯನ್ನ ಶಾಲೆಯವರು ನೀಡಬೇಕು ಎಂದು ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾರು ಡಿಕ್ಕಿಯಾಗಿ ಜಿಂಕೆ ಸಾವು: ಕಳಚಿದ ಲೋಗೋದಿಂದ ಸಿಕ್ಕ ಸುಳಿವು

ರಸ್ತೆ ದಾಟುತ್ತಿದ್ದ ಜಿಂಕೆಗೆ ಬೆಂಜ್ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.

news

ಮೋದಿಯ ಸ್ವಚ್ಛತೆಯ ಪಾಠ ಮಾಡಿದ ಬಿ.ಎಸ್.ಪಿ ಶಾಸಕ!

ಪ್ರಧಾನಿ ನರೇಂದ್ರ ಮೋದಿಯವರ ಹಾದಿಯನ್ನು ರಾಜ್ಯದ ಏಕೈಕ ಬಿ.ಎಸ್.ಪಿ. ಶಾಸಕರು ಹಿಡಿದಿದ್ದಾರಾ? ಇಂತಹದ್ದೊಂದು ...

news

ಸಂಕ್ರಾಂತಿ ನಂತರ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರಾ ಶಾಸಕ ಡಾ. ಉಮೇಶ್ ಜಾಧವ್?

ಬೆಂಗಳೂರು : ಸಚಿವ ಸ್ಥಾನ ಸಿಗದ ಕಾರಣ ಮುನಿಸಿಕೊಂಡಿರುವ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಉಮೇಶ್ ...

news

ಸಂಕ್ರಾಂತಿ ಹಬ್ಬಕ್ಕೆ ಜನರಿಗೆ ತೆಲಂಗಾಣ ಸಿಎಂಯಿಂದ ಭರ್ಜರಿ ಗಿಫ್ಟ್

ಹೈದರಾಬಾದ್ : ಸಂಕ್ರಾಂತಿ ಹಬ್ಬಕ್ಕೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಜನರಿಗೆ ಭರ್ಜರಿ ಗಿಫ್ಟ್ ...