Widgets Magazine

ಸೋನಿಯಾ ಗಾಂಧಿಗೆ ಇಂದು ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿಯಿಂದ ಶುಭ ಹಾರೈಕೆ

ನವದೆಹಲಿ| pavithra| Last Modified ಭಾನುವಾರ, 9 ಡಿಸೆಂಬರ್ 2018 (14:48 IST)
ನವದೆಹಲಿ : ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಂದು 72ನೇ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಸೋನಿಯಾ ಅವರಿಗೆ ಹುಟ್ಟುಹಬ್ಬದ ಕೋರಿದ್ದಾರೆ.


ಸೋನಿಯಾ ಗಾಂಧಿ ಅವರ ಜನ್ಮದಿನದ ಪ್ರಯುಕ್ತ ನಾನು ಶುಭಾಶಯ ಕೋರುತ್ತೇನೆ. ಅವರಿಗೆ ದೇವರು ಆಯುರಾರೋಗ್ಯ ಕರುಣಿಸಲಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.


ಹಾಗೇ ಮಾಜಿ ರಾಷ್ಟ್ರಪತಿ ಡಾ. ಪ್ರಣವ್ ಮುಖರ್ಜಿ, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಡಾ.ಎಂ.ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಲೋಕಸಭೆ ಸಂಸದೀಯ ನಾಯಕ ಡಾ. ಎಂ. ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆ ವಿರೋಧಪಕ್ಷದ ಮುಖಂಡ ಗುಲಾಂ ನಬಿ ಆಜಾದ್, ಎಲ್ಲ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಮುಖಂಡರು ಸೋನಿಯಾಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ.

ಇದರಲ್ಲಿ ಇನ್ನಷ್ಟು ಓದಿ :