ಎನ್`ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ

ನವದೆಹಲಿ, ಸೋಮವಾರ, 17 ಜುಲೈ 2017 (20:10 IST)

Widgets Magazine

ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಅವರನ್ನ ಆಯ್ಕೆ ಮಾಡಲಾಗಿದೆ.


ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದಲ್ಲಿ ನಡೆದ ಸಂಸದೀಯ ಮಂಡಳಿ ಸಭೆ ಬಳಿಕ ವೆಂಕಯ್ಯನಾಯ್ಡು ಅವರನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ದಕ್ಷಿಣ ಭಾರತದವರನ್ನೇ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಲು ಈ ಹಿಂದೆ ಬಿಜೆಪಿ ವಲಯದಲ್ಲಿ ಮಾತುಗಳು ಕೇಳಿಬಂದಿದ್ದವು. ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹೆಸರು ಸಹ ಕೇಳಿಬಂದಿತ್ತು. ನಾಳೆ ಬೆಳಗ್ಗೆ 11 ಗಂಟೆಗೆ ವೆಂಕಯ್ಯನಾಯ್ಡು ನಾಮಪತ್ರ ಸಲ್ಲಿಸಲಿದ್ಧಾರೆ.

ಈಗಾಗಲೇ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಗೋಪಾಲಕೃಷ್ಣ ಗಾಂಧಿ ಅವರನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿವೆ. ಪಕ್ಷಗಳ ಬಲಾಬಲ ನೋಡಿದರೆ ಎನ್`ಡಿಎ ಬಲವೇ ಹೆಚ್ಚಿದ್ದು, ವೆಂಕಯ್ಯನಾಯ್ಡು ಗೆಲ್ಲುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ವೆಂಕಯ್ಯನಾಯ್ಡು ಉಪರಾಷ್ಟ್ರಪತಿ ಎನ್`ಡಿಎ Nda Vice President Venkaiah Naidu

Widgets Magazine

ಸುದ್ದಿಗಳು

news

ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಗುಪ್ತಾಂಗದಲ್ಲಿ ಕಲ್ಲು ತೂರಿದ ದುಷ್ಕರ್ಮಿಗಳು

ಮುಂಬೈ: ಮೂವರು ದುಷ್ಕರ್ಮಿಗಳು 40 ವರ್ಷದ ಮಹಿಳೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಲ್ಲದೇ ಲೈಂಗಿಕ ...

news

ಮಲಮಗಳ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದ ಮಲತಂದೆ ಅರೆಸ್ಟ್

ಫತೇಹಬಾದ್: ಮಲತಂದೆಯೊಬ್ಬ ತನ್ನ ಮಲಮಗಳ ಮೇಲೆ ಮೂರು ತಿಂಗಳುಗಳಿಂದ ನಿರಂತರವಾಗಿ ಅತ್ಯಾಚಾರೆವೆಸಗಿದ ಹೇಯ ...

news

ಮುಂಬೈನಲ್ಲಿ ಲಷ್ಕರ್-ಎ-ತೊಯಿಬಾ ಉಗ್ರನ ಬಂಧನ

ಮುಂಬೈ: ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ಜಾಗತಿಕ ಉಗ್ರಗಾಮಿ ಲಷ್ಕರ್-ಎ-ತೊಯಿಬಾ ಸಂಘಟನೆಯ ಉಗ್ರನನ್ನು ...

news

ಪಾಕ್ ಪಡೆಗಳ ಗುಂಡಿನ ದಾಳಿ: ಓರ್ವ ಯೋಧ, ಬಾಲಕಿ ಬಲಿ

ಜಮ್ಮು-ಕಾಶ್ಮೀರದ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ...

Widgets Magazine