ಮಂಗಳೂರು : ದೈವಸಂಕಲ್ಪ ಯೋಜನೆಯಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮೂರನೇ ಹಂತದ ಮಾಸ್ಟರ್ ಪ್ಲಾನ್ನ ಪ್ರಾಸ್ತಾವಿತ ಕಾಮಗಾರಿಗಳನ್ನು ಅಂತಿಮಗೊಳಿಸಲಾಗಿದ್ದು,ಶೀಘ್ರದಲ್ಲಿ ಸಚಿವ ಸಂಪುಟ ಸಭೆಯ ಮುಂದಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದರು.ದೇವಾಲಯದ ಸಮಗ್ರ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶಶಿಕಲಾ ಜೊಲ್ಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ 300 ಕೋಟಿ ರೂ.ಗಳ ಮೂರನೇ ಹಂತದ