ಯುವತಿಯ ಮೇಲೆ ರೇಪ್ ಎಸಗಿ, ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ್ದ ಆರೋಪಿ ಅರೆಸ್ಟ್

ಭೋಪಾಲ್, ಭಾನುವಾರ, 3 ಡಿಸೆಂಬರ್ 2017 (16:08 IST)

ಮೈಕ್ರೋ ಫೈನಾನ್ಸ್ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ 26 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ, ಅತ್ಯಾಚಾರದ ದೃಶ್ಯಗಳನ್ನು ವಿಡಿಯೇ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಪರ್ವೆಜ್, ಸಾಲಕ್ಕಾಗಿ ಎದುರು ನೋಡುತ್ತಿರುವ ಕೆಲವು ಮಹಿಳೆಯರನ್ನು ಪರಿಚಯಿಸುವುದಾಗಿ ಭರವಸೆ ನೀಡಿ ಯುವತಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರದ ವಿಡಿಯೋ ಮಾಡಿ ಹಣ ಕೊಡದಿದ್ದಲ್ಲಿ ಇಂಟರ್‌ನೆಟ್‌ನಲ್ಲಿ ಹಾಕುವುದಾಗಿ ಬೆದರಿಕೆಯೊಡ್ಡಿದ್ದಾನೆ. ಕಳೆದ ಆರು ತಿಂಗಳಲ್ಲಿ ಯುವತಿಯಿಂದ ಎರಡು ಲಕ್ಷ ರೂಪಾಯಿ ವಸೂಲಿ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಪ್ರತಿನಿತ್ಯ ಅತ್ಯಾಚಾರವೆಸಗಿದ್ದಲ್ಲದೇ ಹಣ ನೀಡುವಂತೆ ಒತ್ತಡ ಹೇರುತ್ತಿದ್ದ. ಮಾನ ಮರ್ಯಾದೆಗೆ ಹೆದರಿ ನಾನು ಯಾರ ಬಳಿಯೂ ಘಟನೆಯ ಬಗ್ಗೆ ಹೇಳಿಲ್ಲ ಎಂದು ಯುವತಿ ತಿಳಿಸಿದ್ದಾಳೆ.
 
ಆರೋಪಿ ಪರ್ವೇಜ್ ಯುವತಿ ಉದ್ಯೋಗ ನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಯಿಂದ ದ್ವಿಚಕ್ರಕ್ಕೆ ಸಾಲ ಪಡೆದು ಅದನ್ನೂ ತೀರಿಸುವಂತೆ ಒತ್ತಡ ಹೇರಿದ್ದ. ಇದರಿಂದ ಬೇಸತ್ತ ಯುವತಿ ಕೊನೆಗೂ ಧೈರ್ಯ ಮಾಡಿ ಪೊಲೀಸರಿಗೆ ದೂರು ನೀಡಿದ್ದಾಳೆ.
 
ಆರೋಪಿ ಪರ್ವೇಜ್ ವಿರುದ್ಧ ಅತ್ಯಾಚಾರ, ಜೀವ ಬೆದರಿಕೆ ಸೇರಿದಂತೆ ಇನ್ನಿತರ ಪ್ರ ಕರಣಗಳನ್ನು ದಾಖಲಿಸಿ ಜೈಲಿಗೆ ಅಟ್ಟಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಯಾತ್ರೆಯ ನಂತ್ರ ಯಡಿಯೂರಪ್ಪ ಮಾನಸಿಕವಾಗಿ ಕುಗ್ಗಲಿದ್ದಾರೆ: ಜಾರಕಿಹೊಳಿ

ಬೆಳಗಾವಿ: ಬಿಜೆಪಿ ಪರಿವರ್ತನಾ ಯಾತ್ರೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾನಸಿಕವಾಗಿ ...

news

ಸಂಸದ ಪ್ರತಾಪ್ ಸಿಂಹ ಕಿತಾಪತಿ: ಮಹಿಳಾ ಪೊಲೀಸ್ ಅಧಿಕಾರಿ ಪ್ರಾಣಾಪಾಯದಿಂದ ಪಾರು

ಹುಣಸೂರು: ಹನುಮ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಬಿಳಿಕೆರೆ ಗ್ರಾಮಕ್ಕೆ ಆಗಮಿಸುತ್ತಿದ್ದ ಬಿಜೆಪಿ ಸಂಸದ ...

news

ಅತ್ತಿಗೆಗೆ ಅಶ್ಲೀಲ ವಿಡಿಯೋ ತೋರಿಸಿ ಯಾರಿಲ್ಲ ಬಾ ಅಂದ...!

ಇಂಧೋರ್: ಅತ್ತಿಗೆ ತಾಯಿಯ ಸಮಾನ ಎನ್ನುತ್ತಾರೆ. ಆದರೆ, ಇಲ್ಲೊಬ್ಬ ಅತ್ತಿಗೆಗೆ ಅಶ್ಲೀಲ ವಿಡಿಯೋ ತೋರಿಸಿ ...

news

ಪ್ರೀತಿಸಿ ವಿವಾಹವಾದ ತಿಂಗಳಿಗೆ ಜೋಡಿ ಸಾವು

ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ವಿವಾಹ ಮಾಡಿಕೊಂಡಿದ್ದ ಜೋಡಿಯೂ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ...

Widgets Magazine
Widgets Magazine