Widgets Magazine
Widgets Magazine

ಗಣರಾಜ್ಯೋತ್ಸವ ಹಿನ್ನೆಲೆ: ದೆಹಲಿಯಲ್ಲಿ ಬಿಗಿ ಭದ್ರತೆ

ನವದೆಹಲಿ, ಸೋಮವಾರ, 22 ಜನವರಿ 2018 (16:40 IST)

Widgets Magazine

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಇಂಡಿಯಾ ಗೇಟ್ ಸುತ್ತಮುತ್ತಲೂ ಭದ್ರತಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾರೆ. 
ಶಂಕಿತ ಉಗ್ರರ ಬಂಧನ ಮತ್ತು  ಭಯೋತ್ಪಾದಕ ಗುಂಪುಗಳಿಂದ ದಾಳಿ ಬೆದರಿಕೆ ಇರುವ ಕುರಿತು ಗುಪ್ತಚರ ದಳಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. 40,000ಕ್ಕೂ ಹೆಚ್ಚು ಭದ್ರತಾ ಪಡೆಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. 
 
ಎಲ್ಲ ಶಂಕಿತ ಉಗ್ರರ ಭಾವಚಿತ್ರಗಳನ್ನು ಬಿಡುಗಡೆ ಮಾಡಿರುವ ಪೊಲೀಸರು ಎಲ್ಲ ರೈಲು ನಿಲ್ದಾಣಗಳಲ್ಲಿ ಮತ್ತು ಮೆಟ್ರೋ, ಅಂತರರಾಜ್ಯ ಬಸ್ ನಿಲ್ದಾಣಗಳಲ್ಲಿ ಅವನ್ನು ಲಗತ್ತಿಸಿ ಎಚ್ಚರಿಕೆ ಕಾಯ್ದುಕೊಳ್ಳಬೇಕಾಗಿ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. 
 
40,000ಕ್ಕೂ ಹೆಚ್ಚು ದೆಹಲಿ ಪೊಲೀಸ್ ಮತ್ತು ಅರೆಸೇನಾ ಪಡೆ ಸಿಬ್ಬಂದಿ  ನವದೆಹಲಿಯಾದ್ಯಂತ ನಿಯೋಜನೆಗೊಂಡಿದ್ದು, ವಿಶೇಷವಾಗಿ ಮೆಟ್ರೋ ನಿಲ್ದಾಣಗಳು, ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. 
 
ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಭಾರಿ ಭದ್ರತೆಯನ್ನು ಒದಗಿಸಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಜ್ಯಕ್ಕೆ ರಾಹುಲ್‌ಗಾಂಧಿ ಬಂದಾಗ ಬಂದ್‌ ನಡೆಸುತ್ತೇವೆ– ಶೆಟ್ಟರ್‌

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಬಂದಾಗ ನಾವು ರಾಜ್ಯದ ಬಂದ್‌ಗೆ ಕರೆ ನೀಡುತ್ತೇವೆ ...

news

ಗಣರಾಜ್ಯೋತ್ಸವ ಪಥಸಂಚಲನೆಯಲ್ಲಿ ಎನ್ಎ‌ಸ್‌ಜಿ

ಎನ್ಎಸ್‌ಜಿಯ ಪಥಸಂಚಲನ ತುಕಡಿಯು ಇತರ ತುಕಡಿಗಳೊಂದಿಗೆ ಹೆಜ್ಜೆ ಹಾಕಲಿವೆ ಎಂಬುದಾಗಿ ರಕ್ಷಣಾ ಸಚಿವಾಲಯದ ...

news

‘ಬಳ್ಳಾರಿಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಬಿಡಲ್ಲ'-ಜನಾರ್ದನ ರೆಡ್ಡಿ ಹೀಗ್ಯಾಕೆ ಹೇಳಿದ್ರು ಗೊತ್ತಾ...?

ಬೆಂಗಳೂರು : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ‘ಬಳ್ಳಾರಿಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಬಿಡಲ್ಲ. ...

news

ದಿಡೀರ್ ಜನತಾ ದರ್ಶನ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ನಡೆಸಲುದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ...

Widgets Magazine Widgets Magazine Widgets Magazine