ಪೋನಿನಲ್ಲಿ ಹೆಚ್ಚುಕಾಲ ಮಾತನಾಡಿದ್ದಕ್ಕೆ ಕೋಪಗೊಂಡು ಸಹೋದರಿಯನ್ನೇ ಕೊಲೆ ಮಾಡಿದ ಸಹೋದರ

ಮುಂಬೈ, ಭಾನುವಾರ, 16 ಸೆಪ್ಟಂಬರ್ 2018 (11:18 IST)

ಮುಂಬೈ : ಸಹೋದರನೊಬ್ಬ ತನ್ನ ಸಹೋದರಿ ಹೆಚ್ಚು ಹೊತ್ತು ಮೊಬೈಲ್ ನಲ್ಲಿ ಮಾತನಾಡುತ್ತಿರುವುದಕ್ಕೆ ಆಕೆಯನ್ನು ಕೊಲೆ ಮಾಡಿದ ಘಟನೆ ನಡೆದಿರುವುದಾಗಿ ವರದಿಯಾಗಿದೆ.


ಕಾಜಲ್ ಪಗರೆ (19 ವರ್ಷ) ಸಹೋದರನಿಂದ ಕೊಲೆಯಾದ ದುರ್ದೈವಿ. ಈಕೆ ಕೆಲವು ತಿಂಗಳುಗಳ ಹಿಂದೆ ಸ್ಮಾರ್ಟ್ ಫೋನ್ ವೊಂದನ್ನು ಖರೀದಿಸಿದ್ದಳು. ಆದರೆ ಆಕೆ ಅದರಲ್ಲಿ ತನ್ನ ಸ್ನೇಹಿತನ ಜೊತೆಗೆ ಮಾತನಾಡುತ್ತಾ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದಳು. ಇದರಿಂದ ಬೇಸತ್ತ ಆಕೆಯ 16 ವರ್ಷದ ಸಹೋದರನೊಬ್ಬ ಮನೆಯಲ್ಲಿ ಯಾರು ಇಲ್ಲದ ವೇಳೆ ದುಪ್ಪಟ್ಟದಿಂದ ಆಕೆಯ ಕತ್ತಿಗೆ ಬಿಗಿಯಾಗಿ ಸುತ್ತಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.


ನಂತರ ಪೊಲೀಸ್ ಠಾಣೆಗೆ ಬಂದು ತನ್ನ ಸಹೋದರಿ ಮನೆಯಲ್ಲಿ ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದಾಳೆ ಅವಳ ಬಾಯಿಂದ ಬರುತ್ತಿದೆ ಎಂದು ಸುಳ್ಳು ಹೇಳಿದ್ದಾನೆ. ಅನುಮಾನಗೊಂಡ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದಾಗ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಆತನ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದು ಬಾವಿಗೆ ಎಸೆದ ಪಾತಕಿಗಳು

ವಿಜಯಪುರ : ವಿಜಯಪುರದಲ್ಲಿ ಇತ್ತೀಚೆಗೆ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ...

news

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ?

ಬೆಂಗಳೂರು: ಒಂದೆಡೆ ದೇಶದಲ್ಲಿ ತೈಲ ಬೆಲೆ ದಾಖಲೆಯ ಏರಿಕೆ ಕಾಣುತ್ತಿದ್ದರೆ, ರಾಜ್ಯದಲ್ಲಿ ಪೆಟ್ರೋಲ್, ...

news

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದ್ರೆ ನಂಗೇನೂ ಆಗಲ್ಲ ಎಂದ ಕೇಂದ್ರ ಸಚಿವ

ನವದೆಹಲಿ: ದೇಶದಲ್ಲಿ ದಿನೇ ದಿನೇ ತೈಲ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ರಾಮ್ ದಾಸ್ ...

news

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ದಾಖಲೆ ಏರಿಕೆ

ನವದೆಹಲಿ: ದೇಶದಲ್ಲಿ ತೈಲ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಾಖಲೆಯ ...

Widgets Magazine