ನವದೆಹಲಿ : ಯುರೋಪ್ ಮತ್ತು ಅಮೆರಿಕದ ದೇಶಗಳಲ್ಲಿ ಮಂಕಿಪಾಕ್ಸ್ ಸೋಂಕು ಏರಿಕೆಯಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ನೂತನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.ಜಿಲ್ಲೆಯಲ್ಲಿ ಒಂದೇ ಒಂದು ಪ್ರಕರಣ ಕಾಣಿಸಿಕೊಂಡರು ಅದನ್ನು ಸೋಂಕು ಸ್ಫೋಟ ಎಂದು ಪರಿಗಣಿಸಬೇಕು ಮತ್ತು ಈ ಕುರಿತಾಗಿ ವಿಸ್ತೃತವಾದ ತನಿಖೆ ಕೈಗೊಳ್ಳಬೇಕು ಎಂದು ಸರ್ಕಾರ ಸೂಚನೆ ನೀಡಿದೆ.ಹೊಸ ಪ್ರಕರಣಗಳನ್ನು ಶೀಘ್ರವಾಗಿ ಪತ್ತೆ ಹಚ್ಚಲು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸೋಂಕು ಕಾಣಿಸಿಕೊಂಡವರನ್ನು ಐಸೋಲೇಟ್ ಮಾಡಬೇಕು. ಅಲ್ಲದೇ ಸೋಂಕಿತರ