ಪ್ರಜಾಪ್ರಭುತ್ವದ ಕೊಲೆಯಾಗಿದ್ದು ಯಾವಾಗ ಗೊತ್ತಾ ಕಾಂಗ್ರೆಸ್ಸಿಗರೇ? ಇತಿಹಾಸ ನೆನಪಿಸಿದ ಅಮಿತ್ ಶಾ

ನವದೆಹಲಿ, ಶುಕ್ರವಾರ, 18 ಮೇ 2018 (08:53 IST)


ನವದೆಹಲಿ: ರಾಜ್ಯದಲ್ಲಿ ಬಹುಮತವಿಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಕೊಟ್ಟಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದಿರುವ ರಾಹುಲ್ ಗಾಂಧಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ತಿರುಗೇಟು ಕೊಟ್ಟಿದ್ದಾರೆ.
 
ಸರಣಿ ಟ್ವೀಟ್ ಮೂಲಕ ರಾಹುಲ್ ಗಾಂಧಿ ಮತ್ತು ಅವರ ಪಕ್ಷದ ನಾಯಕರಿಗೆ ತಿರುಗೇಟು ಕೊಟ್ಟಿರುವ ಅಮಿತ್ ಶಾ ಇಂದಿರಾ ಗಾಂಧಿ ಕಾಲದ ತುರ್ತು ಪರಿಸ್ಥಿತಿಯನ್ನು ನೆನಪಿಸಿ ಟಾಂಗ್ ಕೊಟ್ಟಿದ್ದಾರೆ.
 
‘ಬಹುಶಃ ಕಾಂಗ್ರೆಸ್ ಅಧ್ಯಕ್ಷರಿಗೆ ತಮ್ಮ ಪಕ್ಷದ ಇತಿಹಾಸ ನೆನಪಿಗೆ ಬರುತ್ತಿಲ್ಲ. ರಾಹುಲ್ ಗಾಂಧಿಯ ಹಿರಿಯ ತಲೆಮಾರಿನವರು ತುರ್ತು ಪರಿಸ್ಥಿತಿ ಹೇರಿ, ಸಂವಿಧಾನದ 356 ನೇ ವಿಧಿಯನ್ನು ತಪ್ಪಾಗಿ ಬಳಸಿ, ನ್ಯಾಯಾಲಯ, ಮಾಧ್ಯಮ ಮತ್ತು ನಾಗರಿಕ ಸಮಾಜದ ಮೇಲೆ ದೌರ್ಜನ್ಯವೆಸಗಿದ್ದನ್ನು ಅವರು ಮರೆತಿದ್ದಾರೆ’ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
 
ಅಷ್ಟೇ ಅಲ್ಲದೆ, 78 ಮತ್ತು 37 ಸ್ಥಾನ ಪಡೆದು ಜನರಿಂದ ತಿರಸ್ಕೃತಗೊಂಡ ಪಕ್ಷ ರಾಜ್ಯವನ್ನು ಆಳಬೇಕೇ? ಅಥವಾ 104 ಸ್ಥಾನ ಪಡೆದ ಬಿಜೆಪಿಗೆ ಅಧಿಕಾರ ನೀಡಬೇಕೇ ಎಂದು ಶಾ ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಅಮಿತ್ ಶಾ ಕಾಂಗ್ರೆಸ್ ಬಿಜೆಪಿ ಕರ್ನಾಟಕ ರಾಜಕೀಯ ರಾಜ್ಯ ಸುದ್ದಿಗಳು Congress Bjp Amith Shah Karnataka Politics State News

ಸುದ್ದಿಗಳು

news

ಮೂರನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ಈ ಮೂಲಕ ಮೂರನೇ ಬಾರಿಗೆ ...

news

ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ

ಬೆಂಗಳೂರು: ಇಂದು ಬೆಳಿಗ್ಗೆ 9 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ...

news

ಬಿಜೆಪಿ ಸರ್ಕಾರಗಳನ್ನು ಹಲವು ಬಾರಿ ಉರುಳಿಸಿದ ಕಾಂಗ್ರೆಸ್ ನಿಂದ ನಮಗೆ ನೈತಿಕ ಪಾಠ ಬೇಕಿಲ್ಲ: ರವಿಶಂಕರ್ ಪ್ರಸಾದ್

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿರುವ ಬಗ್ಗೆ ಕಾಂಗ್ರೆಸ್ ...

news

ಕಾಂಗ್ರೆಸ್ ಶಾಸಕರು ಈಗ ಎಲ್ಲಿದ್ದಾರೆ?

ಬೆಂಗಳೂರು: ಆಪರೇಷನ್ ಕಮಲದ ಭೀತಿಯಿಂದ ಯಾರ ಕೈಗೂ ಸಿಗದಂತೆ ಕಾಂಗ್ರೆಸ್ ಶಾಸಕರು ರೆಸಾರ್ಟ್ ...

Widgets Magazine