ಕರ್ನಾಟಕ ಬಜೆಟ್: ಶ್ರೀ ಸಾಮಾನ್ಯರಿಗೆ ವಿದ್ಯುತ್, ಇಂಧನ ಶಾಕ್! ರೈತರಿಗೆ ಸಾಲಮನ್ನಾ ಸ್ವೀಟ್!

ಬೆಂಗಳೂರು, ಗುರುವಾರ, 5 ಜುಲೈ 2018 (11:54 IST)

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ ನ್ನು ಸಿಎಂ ಕುಮಾರಸ್ವಾಮಿ ವಿಧಾನಸೌಧದಲ್ಲಿ ಮಂಡಿಸುತ್ತಿದ್ದು, ವಿದ್ಯುತ್, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದ ಶಾಕ್ ಸಿಕ್ಕಿದೆ.
 
ವಿದ್ಯುತ್ ದರ ಪ್ರತಿ ಯೂನಿಟ್ ಗೆ 20 ಪೈಸೆಯಷ್ಟು ಹೆಚ್ಚಳವಾಗಲಿದ್ದರೆ, ಪೆಟ್ರೋಲ್ ಪ್ರತಿ ಲೀಟರ್ ಗೆ 1.14 ರೂ., ಡೀಸೆಲ್ 1.12 ರೂ. ಹೆಚ್ಚಳವಾಗಿರುವುದು ಶ್ರೀ ಸಾಮಾನ್ಯನಿಗೆ ದುಬಾರಿಯಾಗಲಿದೆ. ಮದ್ಯದ ಮೇಲಿನ ಸೆಸ್ ಶೇ. 2 ರಷ್ಟು ಹೆಚ್ಚಳವಾಗಲಿದೆ.
 
ಇನ್ನು ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಸ್ವಕ್ಷೇತ್ರ ಕನಕಪುರಕ್ಕೆ ಹೊಸ ವೈದ್ಯಕೀಯ ಕಾಲೇಜು, ಕುಮಾರಸ್ವಾಮಿ ಕ್ಷೇತ್ರ ರಾಮನಗರದ 40 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಉದ್ದೇಶಿಲಾಗಿದೆ. ಚಾಮರಾಜನಗರ, ಹಾಸನ, ಗದಗದಲ್ಲೂ ಹೊಸ ಆಸ್ಪತ್ರೆ ನಿರ್ಮಿಸಲಾಗುವುದು.
 
ಬಹುನಿರೀಕ್ಷಿತ ರೈತರ ಸಾಲಮನ್ನಾ ಯೋಜನೆಯನ್ನು ಸಿಎಂ ಪ್ರಕಟಿಸಿದ್ದು, 2 ಲಕ್ಷ ರೂ.ವರೆಗಿನ ರೈತರ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ಇದಕ್ಕಾಗಿ ಸರ್ಕಾರ 34 ಸಾವಿರ ಕೋಟಿ ರೂ. ಹೊರೆ ಹೊರಬೇಕಾಗಿದೆ.  ಅಷ್ಟೇ ಅಲ್ಲದೆ, ಹಿಂದಿನ ಸರ್ಕಾರ ಘೋಷಿಸಿದ್ದ ಸಾಲಮನ್ನಾ ಸಂಪೂರ್ಣ ಪಾವತಿ ಮಾಡಲಿದೆ.
 
ರಾಮನಗರದಲ್ಲಿ ಹೊಸ ಚಲನಚಿತ್ರ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಸಿಎಂ ಘೋಷಿಸಿದ್ದಾರೆ. ಇನ್ನು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 100 ಕೋಟಿ ರೂ. ಅನುದಾನ ನೀಡಲಾಗಿದೆ. ತೆಂಗು ಬೆಳೆಗಾರರಿಗೆ 190 ಕೋಟಿ ರೂ. ಅನುದಾನ ನೀಡಲಿದೆ. ಅಷ್ಟೇ ಅಲ್ಲದೆ 8 ಲಕ್ಷ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಜೆಟ್ ಪ್ರತಿ ಜತೆಗೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಎಚ್ ಡಿಕೆ

ಬೆಂಗಳೂರು: ಇಂದು ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ತಮ್ಮ ನೇತೃತ್ವದ ಸ‍ಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ...

news

ಸುನಂದಾ ಪುಷ್ಕರ್ ಸಾವು ಪ್ರಕರಣ: ಶಶಿ ತರೂರ್ ಗೆ ನಿರೀಕ್ಷಣಾ ಜಾಮೀನು

ನವದೆಹಲಿ: ಪತ್ನಿ ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ...

news

ಡಿಕೆಶಿ, ಜಮೀರ್ ಅಹಮ್ಮದ್ ಗೆ ಸದನದಲ್ಲೇ ಸಭಾಪತಿಗಳಿಂದ ಕ್ಲಾಸ್!

ಬೆಂಗಳೂರು: ರಾಜ್ಯ ವಿಧಾನಸಭೆ ಕಲಾಪ ಆರಂಭವಾಗಿ ಎರಡು ದಿನಗಳ ಕಳೆದರೂ ಶಾಸಕರು, ಸಚಿವರ ಗೈರು ಹಾಜರಾತಿ ...

news

ಸುನಂದಾ ಪುಷ್ಕರ್ ಸಾವು ಪ್ರಕರಣ: ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಬೇಲ್ ಸಿಗುತ್ತಾ?

ನವದೆಹಲಿ: ಪತ್ನಿ ಸುನಂದಾ ಪುಷ್ಕರ್ ಅನುಮಾಸ್ಪದ ಸಾವಿನ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಸಂಸದ ಶಶಿ ...

Widgets Magazine
Widgets Magazine