ರಾತ್ರಿಯಿಡೀ ನಿದ್ರೆಯಿಲ್ಲದೆ ಕೆಲಸ ಮಾಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು, ಶುಕ್ರವಾರ, 18 ಮೇ 2018 (09:40 IST)

ಬೆಂಗಳೂರು: ಅಧಿಕಾರ ಸ್ವೀಕರಿಸುವ ಗಳಿಗೆಯಿಂದ ಹಿಡಿದು ಮುಖ್ಯಮಂತ್ರಿ ಎನಿಸಿಕೊಂಡ ಮೇಲೂ ಮುಳ್ಳಿನ ಹಾಸಿಗೆಯಲ್ಲಿರುವ ಸಿಎಂ ಯಡಿಯೂರಪ್ಪಗೆ ನಿದ್ರೆಯೇ ಇಲ್ಲದಂತಾಗಿದೆ.
 
ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಕ್ಕೆ ಮೊದಲು ರಾತ್ರಿ ನಿದ್ರೆಗೆಟ್ಟಿದ್ದ ಯಡಿಯೂರಪ್ಪ, ನಿನ್ನೆ ಕೂಡಾ ನಿದ್ರೆಯಿಲ್ಲದೇ ಅಹೋರಾತ್ರಿ ಸಭೆ, ಸಮಾಲೋಚನೆಯಲ್ಲಿ ತೊಡಗಿಸಿಕೊಂಡಿದ್ದರು. ಖಾಸಗಿ ಹೋಟೆಲ್ ನಲ್ಲಿ ಸಮಾಲೋಚನೆ ನಡೆಸಿ ಬೆಳಗಿನ ಜಾವವಷ್ಟೇ ಮನೆಗೆ ಮರಳಿದ್ದಾರೆ.
 
ಇಂದು ಡಾಲರ್ಸ್ ಕಾಲೊನಿಯಲ್ಲಿರುವ ಸಿಎಂ ನಿವಾಸಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಡಿಜಿಪಿ ನೀಲಮಣಿ ರಾಜು ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದು, ಚರ್ಚೆ ನಡೆಸಿದ್ದಾರೆ. ಅಂತೂ ವಿಶ್ವಾಸ ಮತ ಗಳಿಸುವ ಚಿಂತೆಯ ಜತೆಯಲ್ಲಿ ತಮ್ಮ ಕೆಲಸ ಕಾರ್ಯಗಳಲ್ಲೂ ತೊಡಗಿಸಿಕೊಂಡು ಫುಲ್ ಬ್ಯುಸಿಯಾಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಯಡಿಯೂರಪ್ಪ ಬಿಜೆಪಿ ಕರ್ನಾಟಕ ರಾಜಕೀಯ ರಾಜ್ಯ ಸುದ್ದಿಗಳು Bjp Cm Yedyurappa Karnataka Politics State News

ಸುದ್ದಿಗಳು

news

ಅಧಿಕಾರಕ್ಕಾಗಿ ಜೆಡಿಎಸ್ ಅನೈತಿಕ ಮೈತ್ರಿ ಮಾಡಿಕೊಂಡಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರಕ್ಕಾಗಿ ಅನೈತಿಕ ಮೈತ್ರಿಗೆ ಮುಂದಾಗಿದೆ ಎಂದು ಬಿಜೆಪಿ ಶಾಸಕ ...

news

ರಾಷ್ಟ್ರಪತಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧಾರ

ನವದೆಹಲಿ: ಕರ್ನಾಟಕದಲ್ಲಿ ಬಹುಮತವಿಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ ರಾಜ್ಯಪಾಲರ ...

news

ಹೈದರಾಬಾದ್ ತಲುಪಿದ ಕಾಂಗ್ರೆಸ್-ಜೆಡಿಎಸ್ ಶಾಸಕರು

ಹೈದರಾಬಾದ್: ಕರ್ನಾಟಕದ ಶಾಸಕರ ರೆಸಾರ್ಟ್ ರಾಜಕೀಯ ಈಗ ಬೆಂಗಳೂರಿನಿಂದ ಹೈದರಾಬಾದ್ ಗೆ ಶಿಫ್ಟ್ ಆಗಿದೆ. ...

news

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕದಲ್ಲಿ ಬಹುಮತವಿಲ್ಲದಿದ್ದರೂ ಬಹುದೊಡ್ಡ ಪಕ್ಷ ಎಂಬ ನೆಲೆಯಲ್ಲಿ ಸರ್ಕಾರ ರಚಿಸಿರುವ ...

Widgets Magazine