Widgets Magazine
Widgets Magazine

ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್!

ನವದೆಹಲಿ, ಸೋಮವಾರ, 9 ಏಪ್ರಿಲ್ 2018 (06:39 IST)

ನವದೆಹಲಿ : ಅಫಜಲ್ಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.


ಉತ್ತರ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ಶಾಸಕರಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ದೆಹಲಿಯಲ್ಲಿ ನಿನ್ನೆ  ಪಕ್ಷದ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿಗೆ  ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಪಕ್ಷದ ಶಾಲು ಹೊದ್ದಿಸುವುದರ ಮೂಲಕ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕೇಂದ್ರ ಸಚಿವರಾದ ಅನಂತಕುಮಾರ್, ಪಿಯೂಷ್ ಗೋಯಲ್, ಪ್ರಕಾಶ್ ಜಾವಡೇಕರ್, ಸಂಸದ ಬಿ ಶ್ರೀರಾಮುಲು, ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಅವರು ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು ಅಫಜಲ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು,  ಇದೀಗ ಬಿಜೆಪಿ ಸೇರ್ಪಡೆಯಾಗಿದ್ದ ಕಾರಣ ಈ ಬಾರಿಯೂ ಕೂಡ ಅವರಿಗೆ ಪಕ್ಷದ ಟಿಕೆಟ್ ಖಚಿತವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪೌರ ಕಾರ್ಮಿಕರಿಗೆ ಏನು ಬೇಕು ಕೇಳಿ ಕೊಡ್ತೇವೆ ಎಂದರು ರಾಹುಲ್ ಗಾಂಧಿ!

ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿರುವ ಕಾಂಗ್ರೆಸ್ ...

news

ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಎಂಟ್ರಿ ಕೊಡದ ರಮ್ಯಾ!

ಬೆಂಗಳೂರು: ಖಾಸಗಿ ಹೋಟೆಲ್ ನಲ್ಲಿ ಮಹಿಳಾ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ...

news

ಕೇಂದ್ರದ ಬುಲೆಟ್ ಟ್ರೈನ್ ಯೋಜನೆ ವಿಫಲವಾಗಿದೆ: ರಾಹುಲ್ ಗಾಂಧಿ ವಾಗ್ದಾಳಿ

ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ...

news

ಕಾವೇರಿ ಹೋರಾಟಕ್ಕಿಳಿದ ರಜನೀಕಾಂತ್, ಕಮಲ್ ಹಾಸನ್

ಚೆನ್ನೈ: ಕಾವೇರಿ ನದಿ ನಿರ್ವಹಣೆಗಾಗಿ ಜಲ ನಿರ್ವಹಣಾ ಮಂಡಳಿ ರಚನೆಯಾಗಬೇಕೆಂದು ಒತ್ತಾಯಿಸಿ ತಮಿಳುನಾಡಿನಲ್ಲಿ ...

Widgets Magazine Widgets Magazine Widgets Magazine