ಬೆಳಗಾವಿ : ಮುಂಬರುವ ದಿನಗಳಲ್ಲಿ ಜಂಟಿ ಅಧಿವೇಶನ, ಬಜೆಟ್ ಅಧಿವೇಶನ ಸೇರಿದಂತೆ ಅಧಿವೇಶನ ಕಲಾಪದ ಅವಧಿಯನ್ನು ಹೆಚ್ಚಿಗೆ ನಿಗದಿಪಡಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.ಇದರಿಂದ ಸದನದಲ್ಲಿ ಹೆಚ್ಚಿನ ಸಮಯ ಅರ್ಥಪೂರ್ಣ ಚರ್ಚೆ ನಡೆಯಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇಂದು ಅವರು ಸದನ ಮತ್ತಷ್ಟು ಅರ್ಥಪೂರ್ಣವಾಗಿ ನಡೆಯಬೇಕೆನ್ನುವ ಕುರಿತು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.ಸದನದ ಅಧಿವೇಶನದಲ್ಲಿ ನಿಗದಿಪಡಿಸಿರುವ ನಿಯಮಾವಳಿಗಳನ್ನು ಪಾಲಿಸಿದರೆ ಯಾವುದೇ ಸಮಸ್ಯೆ ಬರುವುದಿಲ್ಲ.