ಬೆಂಗಳೂರಿನ ಪಾಲಿಗೆ ನಿಜವಾಗುತ್ತಾ ಹವಾಮಾನ ಇಲಾಖೆಯ ಭವಿಷ್ಯ?!

ಬೆಂಗಳೂರು, ಶನಿವಾರ, 15 ಸೆಪ್ಟಂಬರ್ 2018 (09:11 IST)

ಬೆಂಗಳೂರು: ಕೇರಳ ಮತ್ತು ಕೊಡಗಿನಲ್ಲಿ ಪ್ರವಾಹ ಉಂಟಾದಾಗ ಸೆಪ್ಟೆಂಬರ್ ನಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಭವಿಷ್ಯ ನುಡಿದಿತ್ತು.
 

ಅಷ್ಟೇ ಅಲ್ಲದೆ, ನಗರದ ಕೆಲವು ಪ್ರದೇಶಗಳನ್ನು ಅಪಾಯಕಾರಿ ಪ್ರದೇಶ ಎಂದು ಬಿಬಿಎಂಪಿ ಗುರುತಿಸಿತ್ತು. ಅದು ನಿಜವಾಗುವ ಭೀತಿ ಇದೀಗ ನಗರದ ಜನರಿಗೆ ಎದುರಾಗಿದೆ.
 
ಕಳೆದ ಎರಡು ದಿನಗಳಿಂದ ನಗರದಲ್ಲಿ ಸಂಜೆ ಮತ್ತು ರಾತ್ರಿ ವೇಳೆ ಭಾರೀ ಮಳೆಯಾಗುತ್ತಿದ್ದು ಇಂದೂ ಕೂಡಾ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಭಾರೀ ಗುಡುಗು, ಗಾಳಿ ಸಮೇತ ಮಳೆಯಾಗುತ್ತಿದ್ದು, ಜನ ಜೀವನಕ್ಕೆ ತೊಂದರೆಯಾಗಿದೆ. ಬೆಂಗಳೂರಿನ ಉತ್ತರ ಭಾಗದಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಹಲೆವೆಡೆ ಮರಗಳು ಧರೆಗುರುಳಿದ್ದು, ಮನೆ ಕುಸಿದ ಘಟನೆಯೂ ನಡೆದಿದೆ. ರಸ್ತೆಯಲ್ಲಿ ನೀರು ತುಂಬಿದ್ದಲ್ಲದೆ, ಮಳೆಯಿಂದಾಗಿ ಬಸ್ ಸಂಚಾರವೂ ವಿರಳವಾಗಿ ಜನರು ಸಂಜೆ ವೇಳೆಗೆ ಮನೆಗೆ ಮರಳುವುದು ಕಷ್ಟವಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಆಪರೇಷನ್ ಕಮಲ ಮಾಡಲು ಹೊರಟ ಬಿಜೆಪಿ ನಾಯಕರಿಗೆ ಅಮಿತ್ ಶಾ ಖಡಕ್ ಸೂಚನೆ?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್ ನ ಕೆಲವು ಶಾಸಕರನ್ನು ಬಿಜೆಪಿ ...

news

10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ರೋಡ್ ನಲ್ಲಿ ಎಸೆದು ಹೋದ ಪಾಪಿಗಳು

ನವದೆಹಲಿ : 10 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಹಲ್ಲೆ ಮಾಡಿ ರಸ್ತೆ ಬದಿ ಎಸೆದು ಹೋಗಿರುವ ಘಟನೆ ...

news

ತೀವ್ರ ಅನಾರೋಗ್ಯದ ಹಿನ್ನಲೆ ; ಅಧಿಕಾರದಿಂದ ಕೆಳಗಿಳಿಯಲು ನಿರ್ಧಾರ ಮಾಡಿದ ಗೋವಾ ಸಿಎಂ

ಪಣಜಿ : ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅಧಿಕಾರದಿಂದ ...

news

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸ್ತೇವೆ ಎಂದ ಡಿಸಿಎಂ

ಪಕ್ಷದಲ್ಲಿ ಭಿನ್ನಾಭಿಪ್ರಾಯ ಹಾಗೂ ಅಸಮಧಾನಗಳು ಏಳೋದು ಸಹಜ. ಆದರೆ ಅವುಗಳನ್ನು ಮಾತುಕತೆ ಮೂಲಕ ...

Widgets Magazine