ಕೋಲಾರ : ಅಕಾಲಿಕ ಮಳೆಯಿಂದ ಅಪಾರ ಆಸ್ತಿಪಾಸ್ತಿ, ಬೆಳೆ ನಷ್ಟಕ್ಕೊಳಗಾಗಿರುವ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಬೆಳೆ ಹಾನಿ ಪರಿಶೀಲಿಸಿದರು. ರೈತರ ಜಮೀನುಗಳಿಗೆ ತೆರಳಿ ಪರಿಶೀಲನೆ ನಡೆಸಿದ ಅವರು ಮಳೆಯಿಂದಾಗಿ ತುಂಬಿದ, ಕಟ್ಟೆಯೊಡೆದ ಕೆರೆಗಳನ್ನೂ ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಹಾಳಾದ ಕೆರೆ ಏರಿ ದುರಸ್ತಿಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು, ಮನೆಗಳಿಗೆ ನೀರು ನುಗ್ಗಿದ್ದರೆ ತಕ್ಷಣ 10 ಸಾವಿರ ರುಪಾಯಿ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದರು. ಮಳೆಯಿಂದಾಗಿ ತೀವ್ರ