Widgets Magazine
Widgets Magazine

ಹಿಂಬಾಗಿಲ ಮೂಲಕ ಅಧಿಕಾರ ಪಡೆಯಲು ಕಾಂಗ್ರೆಸ್ ಯತ್ನ: ಮೋದಿ, ಶಾ ಟೀಕೆ

ನವದೆಹಲಿ, ಬುಧವಾರ, 16 ಮೇ 2018 (07:45 IST)

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ನವದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
40 ಸೀಟು ಹೊಂದಿದ್ದ ಬಿಜೆಪಿ ರಾಜ್ಯದಲ್ಲಿ ಈಗ 104 ಸ್ಥಾನಕ್ಕೇರಿದೆ. ಇದು ಬಿಜೆಪಿಯ ಗೆಲುವಲ್ಲವೇ? ಬಹುಮತವಿಲ್ಲ ಎಂದು ಕಾಂಗ್ರೆಸ್ ಸುಳ್ಳು ಪ್ರಚಾರ ನಡೆಸುತ್ತಿದೆ ಎಂದು ಅಮಿತ್ ಶಾ ಟೀಕೆ ಮಾಡಿದ್ದಾರೆ.
 
ಮತ್ತೊಂದೆಡೆ ಪ್ರಧಾನಿ ಮೋದಿ ಕೂಡಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನ್ನು ಕರ್ನಾಟಕದಲ್ಲಿ ಜನ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಹಾಗಿದ್ದರೂ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ ಎಂದು ಟೀಕಿಸಿದ್ದಾರೆ. ಈ ನಡುವೆ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಮೋದಿ, ಶಾ ಧನ್ಯವಾದ ಸಲ್ಲಿಸಿದ್ದಾರೆ.
 
ಅಲ್ಲದೆ, ಉರಿಬಿಸಿಲಿದ್ದರೂ ಕರ್ನಾಟಕದ ಜನತೆ ತಮ್ಮ ಸಮಾವೇಶಗಳಿಗೆ ಬಂದಿದ್ದನ್ನು ಸ್ಮರಿಸಿಕೊಂಡರು. ಅಷ್ಟೇ ಅಲ್ಲ, ಯಾವ ಭಾಷೆಯಲ್ಲಿ ಬೇಕಾದರೂ ಮಾತನಾಡಿ ಎಂದು ಹೃದಯವಂತಿಕೆ ಮೆರೆದ ಕನ್ನಡಿಗರಿಗೆ ಮೋದಿ ಧನ್ಯವಾದ ಸಮರ್ಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಂದು ಅಪ್ಪನಾಣೆ ಆಗಲ್ಲ ಎಂದ ಸಿದ್ದರಾಮಯ್ಯ ಬಾಯಲ್ಲೇ ಇಂದು ಕುಮಾರಸ್ವಾಮಿ ಸಿಎಂ ಎಂಬ ಮಾತು!

ಬೆಂಗಳೂರು: ಜೆಡಿಎಸ್ ಜತೆ ಸೇರಿಕೊಂಡು ಸರ್ಕಾರ ರಚಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಇಂದು ಶಾಸಕಾಂಗ ...

news

ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಲು ಮತ ನೀಡಿದ ಕರ್ನಾಟಕದ ಜನತೆಗೆ ಧನ್ಯವಾದಗಳು – ಅಮಿತ್ ಶಾ

ನವದಿಲ್ಲಿ : ರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಇದರಲ್ಲಿ ಬಿಜೆಪಿ ಬಹುಮತ ಪಡೆಯದಿದ್ದರೂ, ಅತಿ ...

news

ಟ್ವೀಟರ್ ನಲ್ಲಿ ತಮ್ಮ ಸೋಲಿಗೆ ಕಾರಣ ತಿಳಿಸಿದ ನಟ ಜಗ್ಗೇಶ್

ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಯಶವಂತಪುರ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ...

news

ಟೀಕಿಸಿದವರಿಗೆ ನಟ ಪ್ರಕಾಶ್ ರೈ ನೀಡಿದ ಉತ್ತರವೇನು ಗೊತ್ತಾ…?

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ...

Widgets Magazine Widgets Magazine Widgets Magazine