ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಧಾರಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿತ್ತು. ಅಲ್ಲದೇ ನಿನ್ನೆ ಸಹ ಭಾರೀ ಮಳೆಯಾಗಿದ್ದು, ಮುಂದಿನ ಕೆಲ ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಕೂಡ ನಗರದ ಹಲವು ಮನೆಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಜನರು ಮಳೆಯಿಂದಾಗಿ ಪರದಾಡುತ್ತಿರುವ ಮಧ್ಯೆ ಬೆಸ್ಕಾಂ ಪ್ರತಿದಿನ ವಿವಿಧ ಪ್ರದೇಶಗಳಲ್ಲಿ ಪವರ್ ಕಟ್ ಮಾಡುತ್ತಿದ್ದು, ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿದಿನ