ಬೆಂಗಳೂರು : ಫೆಬ್ರವರಿ 7 ರಿಂದ ಬಜೆಟ್ ಪೂರ್ವಭಾವಿ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಬುಧವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು ಎಂದು ಹೇಳಿದರು. ಆಯವ್ಯಯಕ್ಕೂ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಸೇರುವ ವಾಡಿಕೆಯಿದೆ. ಈ ಸಭೆಗೆ ಸಮಯ ನಿಗದಿಯಾಗುತ್ತಿದೆ. ಅಂತರರಾಜ್ಯ ಜಲವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನೂ ಭೇಟಿಯಾಗಲಿದ್ದು, ಸೋಮವಾರ ದೆಹಲಿಗೆ ಪ್ರಯಾಣ