ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ವಿಚಾರದಲ್ಲಿ ಸಮಸ್ಯೆಗಳು ಉದ್ಭವಿಸಿದೆಯಾ? ಈ ಬಗ್ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು, ಭಾನುವಾರ, 27 ಮೇ 2018 (07:25 IST)

ಬೆಂಗಳೂರು : ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ವಿಚಾರದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸಿದೆ. ಆದರೆ ಸರಕಾರವೇ ಬಿದ್ದುಹೋಗುವ ಮಟ್ಟದಲ್ಲಿ ಏನಿಲ್ಲ. ಎಲ್ಲ ಸಮಸ್ಯೆಗಳು ಶೀಘ್ರವೇ ಶಮನವಾಗಲಿದೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ಕಾಂಗ್ರೆಸ್ ನಾಯಕರು ಅವರ ಹೈಕಮಾಂಡ್ ಭೇಟಿಗಾಗಿ ಹೊಸದಿಲ್ಲಿಗೆ ತೆರಳಿದ್ದು, ಮಾತುಕತೆ ನಡೆಸುತ್ತಿದ್ದಾರೆ. ಅವರು ತೀರ್ಮಾನ ಕೈಗೊಂಡ ಬಳಿಕ ಮುಂದಿನ ಹಾದಿ ಸುಗಮವಾಗಲಿದೆ. ಸಂಪುಟವನ್ನು ವಿಸ್ತರಣೆ ಮಾಡಿ, ಖಾತೆಗಳನ್ನು ಹಂಚಿಕೆ ಮಾಡಬೇಕಾಗಿದೆ. ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ರೈತರ ಸಾಲ ಮನ್ನಾ ವಿಚಾರದಲ್ಲಿ ಯಾವುದೇ ಆತುರದ ಅಥವಾ ವಿಳಂಬದ ನಿರ್ಧಾರವನ್ನು ಕೈಗೊಳ್ಳುವುದಿಲ್ಲ. ಅಧಿಕಾರಿಗಳು, ತಜ್ಞರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಚುನಾವಣೆ ಸಂದರ್ಭದಲ್ಲಿ ಮತ್ತೆ ಸಂಕಷ್ಟಕ್ಕೆ ಸಿಲುಕಿದ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ

ಬೆಂಗಳೂರು : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಇನ್ನೇನು ಕೆಲವು ದಿನಗಳು ಮಾತ್ರ ...

news

ರಜನಿಕಾಂತ್‌ ಅಭಿನಯದ ‘ಕಾಲಾ’ ಚಿತ್ರ ಕರ್ನಾಟಕದಲ್ಲಿ ರಿಲೀಸ್ ಆಗದಂತೆ ಕನ್ನಡ ಪರ ಸಂಘಟನೆಗಳಿಂದ ತಡೆ

ಮೈಸೂರು : ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರು ಕಾವೇರಿ ವಿವಾದದಲ್ಲಿ ಕರ್ನಾಟಕದ ವಿರುದ್ಧ ಮಾತನಾಡಿದ ಕಾರಣ ...

news

ಸಚಿವ ಪದವಿ ಕೊಟ್ಟರೆ ನಿಭಾಯಿಸುವೆ: ಕೆ.ಶ್ರೀನಿವಾಸಗೌಡ

ಕೋಲಾರ: ಮುಖ್ಯಮಂತ್ರಿ ಕುಮಾರಸ್ವಾಮಿ ಸಚಿವ ಪದವಿ ಕೊಟ್ಟಲ್ಲಿ ಪಕ್ಷದ ಘನತೆಗೆ ತಕ್ಕಂತೆ ನಿಭಾಯಿಸುತ್ತೇನೆ ...

news

ಬಿಜೆಪಿ ಸಭೆ: ಚುನಾವಣೆ ಸೋಲಿಗೆ ನಾಯಕರೇ ಹೊಣೆ ಎಂದ ಕಾರ್ಯಕರ್ತರು

ಹಾಸನ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಚುನಾವಣೆ ಸೋಲಿಗೆ ನಾಯಕರೇ ನೇರ ಹೊಣೆ ...

Widgets Magazine