ಮತದಾರರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

ಬೆಂಗಳೂರು, ಶನಿವಾರ, 19 ಮೇ 2018 (06:14 IST)

ಬೆಂಗಳೂರು : ಬಹುಮತ ಸಾಬೀತಿಗೆ 15 ದಿನ ಅವಕಾಶ ನೀಡಿದ್ದು ಸರಿಯಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗಡೆ ಅವರು ಹೇಳಿದ್ದಾರೆ.


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ನಾಳೆಯೇ ಬಿಜೆಪಿಯವರು ಬಹುಮತ ಸಾಬೀತು ಮಾಡಬೇಕು ಎಂಬ ಸುಪ್ರಿಂ ಆದೇಶ ಸ್ವಾಗಾತಾರ್ಹವಾಗಿದೆ. ಕುದುರೆ ವ್ಯಾಪಾರವನ್ನು ತಪ್ಪಿಸಲು ಸಹಕಾರಿಯಾಗುತ್ತದೆ. ರಾಜ್ಯಪಾಲರು ಬಿಜೆಪಿಯನ್ನು ಮೊದಲು ಸರ್ಕಾರ ರಚನೆಗೆ ಆಹ್ವಾನ ಮಾಡಿದ್ದು ಸರಿ. ಇದರಲ್ಲಿ ಯಾವ ತಪ್ಪಿಲ್ಲ. ಆದರೆ ಬಹುಮತ ಸಾಬೀತಿಗೆ 15 ದಿನ ಕಾಲಾವಕಾಶ ನೀಡಿದ್ದು ತಪ್ಪು. ಇದನ್ನು ಸುಪ್ರಿಂ ಕೋರ್ಟ್ ಸರಿಪಡಿಸಿದೆ. ರಾಜ್ಯಪಾಲರ ನಡೆಯನ್ನು ರಾಜಕೀಯವಾಗಿ ಟೀಕೆ ಮಾಡುವುದು ಸುಲಭ. ರಾಜ್ಯಪಾಲರು ಕಾನೂನಾತ್ಮಕವಾಗಿ ನಡೆದುಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.


‘ಇವತ್ತಿನ ರಾಜ್ಯದ ರಾಜಕೀಯ ಪರಿಸ್ಥಿತಿಗೆ ಮತದಾರರೆ ಮೂಲ ಕಾರಣ. ಜಾತಿಗಾಗಿ, ಹಣಕ್ಕಾಗಿ ಮತಹಾಕಿರುವ ಪರಿಣಾಮ ಈ ರೀತಿ ಅಂತ್ರತರ ಸೃಷ್ಟಿಯಾಗಿದೆ ಇದು ಬೇಸರದ ಸಂಗತಿಯಾಗಿದೆ’ ಎಂದು ಸಂತೋಷ್‌ ಹೆಗ್ಡೆ ಅವರು ಮತದಾರರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಮಾಡಿದ ಆರೋಪವೇನು ಗೊತ್ತಾ?

ಬೆಂಗಳೂರು : ಶಾಸಕ ಆನಂದ್ ಸಿಂಗ್ ಅವರು ಯಾರ ಸಂಪರ್ಕಕ್ಕೂ ಸಿಗದ ಹಿನ್ನಲೆಯಲ್ಲಿ ಇದೀಗ ಮಾಜಿ ಸಿಎಂ ...

news

ವಿರೋಧದ ನಡುವೆಯೂ ಹಂಗಾಮಿ ಸ್ಪೀಕರ್ ಆಗಿ ನೇಮಕವಾದ ಕೆಜಿ ಬೋಪಯ್ಯ

ಬೆಂಗಳೂರು: ನಾಳಿನ ವಿಶ್ವಾಸ ಮತ ಪ್ರಕ್ರಿಯೆಗೆ ರಾಜ್ಯ ರಾಜಕೀಯ ಸಜ್ಜುಗೊಂಡಿದೆ. ವಿಶ್ವಾಸ ಮತ ಪ್ರಕ್ರಿಯೆ ...

news

ರಾಜ್ಯಪಾಲರ ವರ್ತನೆ ಖಂಡಿಸಿ ಭಾರಿ ಪ್ರತಿಭಟನೆ

ಬೆಳಗಾವಿ: ವಿಧಾನಸಭೆ ಚುನಾವಣೆ ನಂತರ ರಾಜ್ಯ ಸರಕಾರ ರಚನೆ ವಿಚಾರದಲ್ಲಿ ಗವರ್ನರ್ ವಜುಭಾಯಿ ವಾಲಾ ...

news

ಇವತ್ತಿಗೂ ಸರಕಾರಿ ಬಸ್ ಬಾರದ ಊರು ಇದೆ ಎಂದ್ರೆ ನಂಬುತ್ತೀರಾ?

ದಾವಣಗೆರೆ: ಇಂದು ದಾವಣಗೆರೆ ಜಿಲ್ಲೆ ಸ್ಮಾರ್ಟ್ ಸಿಟಿಯತ್ತ ದಾಪುಗಾಲಿಟ್ಟಿದೆ. ಅಲ್ಲದೆ ಅಭಿವೃದ್ಧಿಯಲ್ಲಿ ...

Widgets Magazine