ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಗಂಭೀರ

ನವದೆಹಲಿ, ಗುರುವಾರ, 16 ಆಗಸ್ಟ್ 2018 (08:12 IST)

ನವದೆಹಲಿ: ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ತೀರಾ ಬಿಗಡಾಯಿಸಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.
 

ಮೂತ್ರ ಸೋಂಕಿನಿಂದ ಬಳಲುತ್ತಿದ್ದ ವಾಜಪೇಯಿ ಕೆಲವು ದಿನಗಳ ಹಿಂದೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರ ಸ್ಥಿತಿ ಮತ್ತಷ್ಟಿ ಬಿಗಡಾಯಿಸಿದ್ದು ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
 
ಅವರ ಆರೋಗ್ಯ ಸ್ಥಿತಿ ಗಂಭೀರ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ನಾಯಕರು, ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಹಿತ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನ್ಯಾಯಾಧೀಶರ ವಿರುದ್ಧವೇ ಅತ್ಯಾಚಾರ ಆರೋಪ ದಾಖಲು; ಇಂದು ನ್ಯಾಯಾಧೀಶ ಅರೆಸ್ಟ್

ಹೈದರಾಬಾದ್ : ದೇಶದಾದ್ಯಂತ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಇಂತಹ ಘಟನೆಗಳನ್ನು ಖಂಡಿಸಿ ...

news

ಬೆಂಗಳೂರು-ಮಂಗಳೂರು ರಸ್ತೆ ಬಂದ್! ಬದಲಿ ಮಾರ್ಗ ಯಾವುದು?

ಮಂಗಳೂರು: ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಬೆಂಗಳೂರು ಮತ್ತು ಮಂಗಳೂರು ನಡುವಿನ ಸಂಪರ್ಕ ರಸ್ತೆ ...

news

ಪ್ರಧಾನಿ ಮೋದಿಯಿಂದ ಇಂದು ಭಾಷಣದ ದಾಖಲೆ

ನವದೆಹಲಿ: ತಮ್ಮ ಈ ಸರ್ಕಾರದ ಅವಧಿಯ ಕೊನೆಯ ಸ್ವಾತಂತ್ರ್ಯೋತ್ಸವ ಭಾಷಣ ಮಾಡಿದ ಪ್ರಧಾನಿ ಮೋದಿ ಹೊಸ ...

news

ಮಾನವೀಯ ಮುಖವುಳ್ಳ ಸರ್ಕಾರ ನಮ್ಮದು- ಸಿ ಎಂ ಕುಮಾರಸ್ವಾಮಿ

ಬೆಂಗಳೂರು : ದೇಶದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ...

Widgets Magazine
Widgets Magazine