PRಭಾರತೀಯ ಹಿಂದೂ ಹಬ್ಬಗಳಲ್ಲಿ ಯುಗಾದಿ ನಂತರದ ಸ್ಥಾನ ಅಕ್ಷಯ ತೃತೀಯಕ್ಕೆ ಸಲ್ಲುತ್ತದೆ. ಅಕ್ಷಯ ತೃತೀಯ ದಿವಸ ಶುಭ ಮುಹೂರ್ತಗಳೇ ತುಂಬಿಕೊಂಡಿರುವ, ಜೀವನದ ಅಭಿವೃದ್ದಿ ಕುರಿತು ಸಂಕಲ್ಪಗಳೆಲ್ಲವನ್ನೂ ಸಾಕಾರಗೊಳಿಸುವ ಮಹಾ ಸುದಿನವಾಗಿದೆ. ಅಕ್ಷಯವೆಂದರೆ, ಕ್ಷಯವಿಲ್ಲದ್ದು, ಕಡಿಮೆಯಿಲ್ಲದ್ದು, ಕ್ಷೀಣವಾಗದ್ದು, ಕೊನೆಯಿಲ್ಲದ್ದು, ನ್ಯೂನತೆವಿಲ್ಲದ್ದು, ಇದು ಸಂವೃದ್ದಿಯ ಸಂಕೇತ, ಶುಭಾರಂಭದ ದ್ಯೋತಕ. ನಿರಂತರೆಯ ಪ್ರತೀಕ. ಆದ್ದರಿಂದಲೇ ಈ ದಿನವಸ ಹೊಸ ಶುಭಕಾರ್ಯಗಳ ಪ್ರಾರಂಭ, ಗೃಹಪ್ರವೇಶ, ಅಕ್ಷರಾಭ್ಯಾಸ, ಹೊಸ ಉದ್ಯಮ, ವ್ಯಾಪಾರ, ವ್ಯವಹಾರಗಳ ಪ್ರಾರಂಭ ಉಪನಯನ, ವಿವಾಹ,