PRನಂದನನಾಮ ಸಂವತ್ಸರದಲ್ಲಿ ಆಗಸ್ಟ್ 18 ರಿಂದ ಸೆಪ್ಟಂಬರ್ 16 ರವರೆಗೆ ಅಧಿಕ ಭಾದ್ರಪದ ಮಾಸವಿರುತ್ತದೆ. ಯಾವ ಚಾಂದ್ರಮಾಸದಲ್ಲಿ ಸೂರ್ಯ ಸಂಕ್ರಾಂತಿ ಇರುವುದಿಲ್ಲವೋ ಆ ಮಾಸವನ್ನು ಅಧಿಕ ಮಾಸವೆಂದು ಪರಿಗಣಿಸಲಾಗುವುದು. ಸೂರ್ಯನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸುವುದನ್ನು ಸಂಕ್ರಾಂತಿ ಎಂದು ಕರೆಯಲಾಗುವುದು. ಪ್ರತೀ 33ನೇ ಚಾಂದ್ರಮಾಸವು ಅಧಿಕ ಮಾಸವಾಗಿರುತ್ತದೆ. ವಶಿಷ್ಟ ಸಿದ್ದಾಂತ ಪ್ರಕಾರ ಅಧಿಕ ಮಾಸವು 32 ತಿಂಗಳು 16 ದಿವಸಗಳು, 3 ಗಂಟೆ 12 ನಿಮಿಷಕ್ಕೆ ಬರುತ್ತದೆ. ಈ