ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ
ಮುಖ್ಯ ಪುಟ ಮನರಂಜನೆ » ಸ್ಯಾಂಡಲ್ ವುಡ್ » ಸುದ್ದಿ/ಗಾಸಿಪ್ » ಉಯ್ಯಾಲೆಯಲ್ಲಿ ರಘುವೀರ್ ರೀ ಎಂಟ್ರಿ
ಸುದ್ದಿ/ಗಾಸಿಪ್
Feedback Print Bookmark and Share
 
ಹಳೆಯ ನಟರು ಮತ್ತೆ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಚೈತ್ರದ ಪ್ರೇಮಾಂಜಲಿ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೀರೋ ಆಗಿ ಗುರುತಿಸಿಕೊಂಡ ರಘುವೀರ್ ಬರೋಬ್ಬರಿ 10 ವರ್ಷಗಳ ನಂತರ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ದಿನೇಶ್ ಬಾಬು ನಿರ್ದೇಶನದ ಉಯ್ಯಾಲೆ ಚಿತ್ರದಲ್ಲಿ ಅತಿಥಿ ಪಾತ್ರವೊಂದರಲ್ಲಿ ನಟಿಸಲಿದ್ದಾರೆ.

"ರಘುವೀರ್ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಚಿತ್ರರಂಗ ತಿಳಿದಿತ್ತು. ಆದರೆ ನಾನು ಅವರನ್ನು ಸಂಪರ್ಕಿಸಿ ಚಿತ್ರಕಥೆ ವಿವರಿಸಿದೆ. ಈ ಚಿತ್ರದಲ್ಲಿ ಆಟೋ ಡ್ರೈವರ್ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ. ನಾಯಕಿ ಡೈರಿ ಕಳೆದು ಹೋಗಿರುತ್ತದೆ. ಅದನ್ನು ರಘುವೀರ್ ತಂದು ಕೊಟ್ಟು ನಾಯಕ-ನಾಯಕಿಯರನ್ನು ಒಂದು ಮಾಡುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ" ಎಂದರು ನಿರ್ದೇಶಕ ದಿನೇಶ್ ಬಾಬು.

ರಘುವೀರ್ ಮುಗಿಲ ಚುಂಬನ ಚಿತ್ರದ ನಿರ್ಮಾಣದ ಜೊತೆಗೆ ನಾಯಕರಾಗಿಯೂ ನಟಿಸಿದ್ದರು. ಆದರೆ ಆ ಚಿತ್ರ ಬಿಡುಗಡೆಯಾಗಲಿಲ್ಲ. ಈ ಚಿತ್ರದ ನಂತರ ಎರಡು ಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ನಟಿಸಿದರೂ ಆ ಚಿತ್ರಗಳು ಕೂಡಾ ಬಿಡುಗಡೆಯ ಭಾಗ್ಯ ಕಾಣಲಿಲ್ಲ. ಈಗ ಮತ್ತೆ ಬಂದಿದ್ದಾರೆ. ಪ್ರೇಕ್ಷಕರ ಪ್ರತಿಕ್ರಿಯೆ ಯಾವ ರೀತಿ ಇರುತ್ತದೆ ಎಂದು ಕಾದು ನೋಡಬೇಕು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ದಿನೇಶ್ ಬಾಬು, ರಘುವೀರ್, ಚೈತ್ರದ ಪ್ರೇಮಾಂಜಲಿ