(ಚಿತ್ರ, ಲೇಖನ :ಬಿ.ಎಂ.ಲವಕುಮಾರ್, ಮೈಸೂರು )WD ಆನೆಗಳು ಮೈಸೂರು ದಸರಾದ ಪ್ರಮುಖ ಆಕರ್ಷಣೆ. ಜೊತೆಗೆ ಜಂಬೂ ಸವಾರಿಯ ರೂವಾರಿಗಳೂ ಹೌದು. ಆನೆಗಳಿಲ್ಲದ ದಸರಾವನ್ನು ಊಹಿಸಲೂ ಸಾಧ್ಯವಿಲ್ಲ. ವಿವಿಧ ಆನೆ ಶಿಬಿರಗಳಿಂದ ಎರಡು ತಂಡವಾಗಿ ಆಗಮಿಸುವ ಗಜಪಡೆ, ಕಾಡಿನಿಂದ ನಗರ ಪ್ರವೇಶಿಸುತ್ತಿದ್ದಂತೆಯೇ ಮೈಸೂರಿಗೆ ದಸರಾ ಕಳೆ ಬಂದು ಬಿಡುತ್ತದೆ.ದಸರಾಕ್ಕೆ ಸುಮಾರು ಒಂದೂವರೆ ತಿಂಗಳಿರುವಾಗಲೇ ನಾಗರಹೊಳೆಯ ವೀರನಹೊಸಹಳ್ಳಿಯಿಂದ ಬಲರಾಮ ನೇತೃತ್ವದ ಆರು ಆನೆಗಳ ಮೊದಲ ತಂಡದ ಗಜಪಯಣ ಮೈಸೂರಿಗೆ ಆಗಮಿಸಿದರೆ, ಆ ನಂತರ