ರಾಜೇಶ್ ಪಾಟೀಲ್ ಹಲವಾರು ಮಹಾನುಭಾವರ ತ್ಯಾಗ ಬಲಿದಾನಗಳ ಮೂಲಕ ಗಳಿಸಿದ ಭಾರತದ ಸ್ವಾತಂತ್ರ್ಯದ ಇತಿಹಾಸ ರೋಚಕವಾದದ್ದು, ದೇಶ ಸ್ವಾತಂತ್ರ್ಯ ಗಳಿಸುವ ನಿಟ್ಟಿನಲ್ಲಿ ಚಳುವಳಿಗೆ ಧುಮುಕಿ ಹೋರಾಟ ನಡೆಸಿದವರು ಅಸಂಖ್ಯಾತ ಮಂದಿ. ಅವರಲ್ಲಿ ಭಾರತದ ಉಕ್ಕಿನ ಮನುಷ್ಯ ಎಂದೇ ಕರೆಸಿಕೊಂಡ ವಲ್ಲಭಭಾಯಿ ಪಟೇಲ್ ಕೂಡಾ ಪ್ರಮುಖರು.ಗುಜರಾತ್‌ನ ನಡಿಯಾಡ್ ಗ್ರಾಮದಲ್ಲಿ ಝವೇರ್ ಭಾಯಿ ಮತ್ತು ಲಾಡ್‌ಬಾಯಿ ದಂಪತಿಗಳ ಸುಪುತ್ರರಾಗಿ ರೈತರ ಕುಟುಂಬದಲ್ಲಿ ಜನಿಸಿದ ಅವರು, 1917ರಲ್ಲಿ ಗೆಳೆಯರ ಒತ್ತಾಯದ ಮೇರೆಗೆ ಚುನಾವಣೆಯಲ್ಲಿ ಸ್ಪರ್ಧಿಸಿ