ಅವಿನಾಶ್ ಬಿ. PTI ಸಪ್ತಸಾಗರ ದಾಟಿ ಹುಡುಕಾಡಿದರೂ ಬೇರೊಬ್ಬರಿಗೆ ನಿನ್ನಂತಹ ಅಮ್ಮ ದೊರೆಯುವುದು ಖಂಡಿತಾ ಸಾಧ್ಯವಿಲ್ಲ!ಈ ಮೇಲಿನ ವಾಕ್ಯವನ್ನು ಮಗದೊಮ್ಮೆ ಯೋಚಿಸಿ ನೋಡಿ. ಹೌದಲ್ವಾ... ಅಮ್ಮ ಎಂಬುದೊಂದು ಯುನೀಕ್ ಐಡೆಂಟಿಟಿ. ಬಹುಶಃ ದೇವರು ಕೂಡ ಆ ಅಮ್ಮನಿಗೆ ಸಾಟಿಯಲ್ಲ ಎಂದರೂ ತಪ್ಪಾಗಲಾರದು.ಬದುಕಿನ ತಲ್ಲಣಗಳ ನಡುವೆ ಪ್ರತಿಯೊಂದು ಕ್ಷಣ ಪಾತ್ರ ಬದಲಿಸುತ್ತಾ, ಅಮ್ಮನಾಗಿ, ಅನಿವಾರ್ಯತೆ ಬಂದಾಗ ಅಪ್ಪನಾಗಿಯೂ, ಅಕ್ಕನಾಗಿ, ಮಗಳಾಗಿ, ತಂಗಿಯಾಗಿ, ಅಪ್ಪನ ಸಿಡುಕಿನ ನಡುವೆ ಮಗುವಿಗೆ ಗೆಳತಿಯಾಗಿ ಎಲ್ಲ ಪಾತ್ರಗಳಿಗೂ