ಅವಿನಾಶ್ ಬಿ. ಕನ್ನಡದ ನೆಲದ ಪುಲ್ಲೆನಗೆ ಪಾವನ ತುಲಸಿ!ಕನ್ನಡದ ನೆಲದ ನೀರ್ವೊನಲೆನಗೆ ದೇವನದಿಕನ್ನಡದ ನೆಲದ ಕಲ್ಲೆಮಗೆ ಶಾಲಗ್ರಾಮ ಶಿಲೆ! ಕನ್ನಡಂ ದೈವಮೈ!ಕನ್ನಡದ ಶಬ್ದಮೆಮಗೋಂಕಾರಮೀಯೆನ್ನಕನ್ನಡದ ನುಡಿಯೆ ಗಾಯತ್ರಿಯದ್ಭುತ ಮಂತ್ರ-ಮಿನ್ನಾವುದೈ ಪೆರತು ಕನ್ನಡದ ಸೇವೆಯಿಂದಧಿಕಮೀ ಜಗದೊಳಗೆ?ಅಂತ ಸಾಲಿ ರಾಮಚಂದ್ರರಾಯರು ಕನ್ನಡ ನುಡಿಯ ಬಗ್ಗೆ ಕನ್ನಡಿಗನಿಗಿರುವ ಪೆರ್ಮೆಯನ್ನು, ಗರ್ವವನ್ನು ಅತ್ಯದ್ಭುತವಾಗಿ ವಿವರಿಸಿದ್ದಾರೆ.WD ಈಗಷ್ಟೇ (ಅಕ್ಟೋಬರ್ 31, 2008ರ ಸಂಜೆ) ಶಾಸ್ತ್ರೀಯ ಭಾಷೆ ಎಂದು ಅಧಿಕೃತವಾಗಿ ಗುರುತಿಸಲ್ಪಟ್ಟ ಕನ್ನಡವೊಂದು ಭಾಷೆ ಮಾತ್ರವೇ ಅಲ್ಲ, ಅದೊಂದು ಸಂಸ್ಕೃತಿ,