ನಾಗೇಂದ್ರ ತ್ರಾಸಿ ND ದಕ್ಷಿಣ ಭಾರತದ ಗಾಂಧಿ ಎಂದು ಪ್ರಸಿದ್ಧಿ ಪಡೆದವರಿವರು. ಕರ್ನಾಟಕದಲ್ಲಿ ಮೊತ್ತ ಮೊದಲ ಬಾರಿಗೆ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಕ್ಕೆ ಚಾಲನೆ ಕೊಟ್ಟ ದೇಶಪ್ರೇಮಿ. ಅವರೇ ಕಾರ್ನಾಡ್ ಸದಾಶಿವ ರಾವ್ (1881-1937).ಮಂಗಳೂರಿನ ಕಾರ್ನಾಡ್ ಎಂಬಲ್ಲಿ 1881ರಲ್ಲಿ ಜನಿಸಿದ ಸದಾಶಿವರಾವ್ ಕಾರ್ನಾಡ್ ಎಂದೇ ಚಿರಪರಿಚಿತರು. ರಾಮಚಂದ್ರ ರಾವ್ ಹಾಗೂ ರಾಧಾಭಾಯಿ ದಂಪತಿಯ ಏಕೈಕ ಪುತ್ರರಾದ ಇವರು ಮದ್ರಾಸಿನಲ್ಲಿ ಪದವಿ ಶಿಕ್ಷಣ ಪಡೆದು, ಮುಂಬೈಯಲ್ಲಿ ಕಾನೂನು ಪದವಿ ಗಳಿಸಿ, ಮಂಗಳೂರಿನಲ್ಲಿ ವಕೀಲರಾಗಿ