NRB 74ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದವರು ಪ್ರೊ.ಎಲ್.ಎಸ್.ಶೇಷಗಿರಿ ರಾವ್. ಕನ್ನಡ ಸಾರಸ್ವತ ಲೋಕದಲ್ಲಿ ಎಲ್.ಎಸ್.ಎಸ್. ಎಂದೇ ಪರಿಚಿತರಾಗಿರುವ ಶೇಷಗಿರಿ ರಾವ್, ಕನ್ನಡದ ಹೆಸರಾಂತ ವಿಮರ್ಶಕರೂ ಹೌದು. ನ್ಯಾಷನಲ್ ಬುಕ್ ಟ್ರಸ್ಟ್, ಕೇಂದ್ರ ಸಾಹಿತ್ಯ ಅಕಾಡೆಮಿಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ರಾಷ್ಟ್ರೋತ್ಥಾನ ಬಳಗದ ಕಿರು ಹೊತ್ತಿಗೆಯ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರದ ಮೊದಲ ಅಧ್ಯಕ್ಷರು ಎಂಬ ಹೆಗ್ಗಳಿಕೆಯೂ ಇವರದ್ದು. ಇಂಗ್ಲಿಷ್ ಪ್ರಾಧ್ಯಾಪಕರಾಗಿಯೂ ಕನ್ನಡ ಕೈಂಕರ್ಯದಲ್ಲಿ ತಮ್ಮದೇ