ಮತ್ತೆ ನವೆಂಬರ್ 1 ಬಂದಿದೆ. ಸಿಹಿ ಹಂಚಿ, ನಾಮಕಾವಸ್ಥೆಗೆ ರಾಜ್ಯೋತ್ಸವದ ಆಚರಣೆ ನಡೆಯತ್ತದೆ. ಮಂತ್ರಿ ಮಹೋದಯರು (ಸಂತೋಷದ ವಿಷಯವೆಂದರೆ, ಈ ಬಾರಿಯ ರಾಜ್ಯೋತ್ಸವದಲ್ಲಿ ಮಂತ್ರಿ ಮಹೋದಯರ ಆಟೋಟ ಅಷ್ಟಾಗಿಲ್ಲ, ಎಲ್ಲ ರಾಜ್ಯಪಾಲರ ದರ್ಬಾರು) ಭಾಷೆಯ ಹೆಸರಿನಲ್ಲಿ ತಮ್ಮ ವೋಟುಗಳನ್ನು ಗಟ್ಟಿ ಮಾಡಿಕೊಳ್ಳುತ್ತಾರೆ.