ರಜನಿ ಭಟ್ NRB ದೀಪಗಳ ಹಬ್ಬ ದೀಪಾವಳಿ. ದೀಪಾವಳಿ ಸಂಭ್ರಮದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಗೋ ಪೂಜೆ ಕೂಡ ಪ್ರಮುಖ ಸ್ಥಾನವನ್ನು ಪಡೆದಿದೆ. ಮನೆಯಲ್ಲಿರುವ ದನ ಕರುಗಳಿಗೆ ಅಲಂಕರಿಸಿ, ಅವುಗಳಿಗೆ ಶಾಸ್ತ್ರೋಕ್ತ ಪೂಜೆ ಮಾಡಿ, ತಿಂಡಿತಿನಿಸುಗಳನ್ನು ನೀಡುವ ಸಂಪ್ರದಾಯವು ಈಗಲೂ ನಡೆದು ಬಂದಿದೆ. ನಾವು ಆಚರಿಸುವ ಪ್ರತಿಯೊಂದು ಸಂಪ್ರದಾಯಕ್ಕೂ ಒಂದೊಂದು ಹಿನ್ನೆಲೆ ಇರುವಂತೆ ದೀಪಾವಳಿಯ ಸಮಯದಲ್ಲಿನ ಗೋ ಆರಾಧನೆಗೂ ಒಂದು ಪೌರಾಣಿಕ ಹಿನ್ನೆಲೆ ಇದೆ.ಈ ಹಿನ್ನೆಲೆಯ ಪ್ರಕಾರ, ಹಿಂದೆ ಬಲಿಚಕ್ರವರ್ತಿಯು ವಾಮನರೂಪಿ