ಅವಿನಾಶ್ ಬಿ. PTI ಹಬ್ಬ ಎಂದಾಕ್ಷಣ ಮುಖ್ಯವಾಗಿ ನೆನಪಿಗೆ ಬರುವುದೇ ದೀಪಾವಳಿ. ಬಹುಶಃ ಪಟಾಕಿ ಸಿಡಿಸಲು ಅವಕಾಶವಿದೆ ಎಂಬ ಕಾರಣಕ್ಕೆ ಬಾಲ್ಯದಿಂದಲೂ ಮಕ್ಕಳಿಗೆ ಅತ್ಯಂತ ಪ್ರಿಯವಾಗಿ ಬಿಟ್ಟಿರುವುದೇ ಮನದಂಗಳದಲ್ಲಿ ಈ ಮನಸ್ಥಿತಿ ಚಿರಸ್ಥಾಯಿಯಾಗಲು ಕಾರಣವೂ ಇರಬಹುದು.ಸಮಾಜದ ಎಲ್ಲ ವರ್ಗದವರೂ, ಜಾತಿ-ಸಮುದಾಯದವರೂ ಭೇದ-ಭಾವ ಮರೆತು ಭ್ರಾತೃತ್ವ, ಸೌಹಾರ್ದತೆಯ ಪ್ರತೀಕವಾಗಿ ಆಚರಿಸುವ ಹಬ್ಬಗಳಲ್ಲಿ ಅತ್ಯಂತ ಪ್ರಮುಖವಾದದ್ದು ಕೂಡ ದೀಪಾವಳಿಯೇ. ಪ್ರತಿಯೊಂದು ಹಬ್ಬವೂ ತನ್ನದೇ ಆದ ಸಂದೇಶವನ್ನು ಸಾರುತ್ತದೆ. ಅದೇ ರೀತಿ ದೀಪಾವಳಿ ಕೂಡ