ಚಂದ್ರಾವತಿ ಬಡ್ಡಡ್ಕ ಒಂದು ತಿಂಗಳ ಮುಂಚಿತವಾಗಿ ಬಾಳೆ ರೆಂಬೆಗಳನ್ನು ಒಣಹಾಕುವಲ್ಲಿಂದ ಆರಂಭವಾಗುತ್ತಿತ್ತು ದೀಪಾವಳಿ ತಯ್ಯಾರಿ. ಅದಾದ ಬಳಿಕ ಕಾಡುಮೇಡು ಅಲೆದು ಎಲ್ಲಿ ಯಾವ ಹೂವು ಅರಳಿದೆ, ಹೂವಿನಂದದ ಬಳ್ಳಿ ಹೊರಳಿದೆ ಎಂಬ ಹುಡುಕಾಟ. ಇವೆಲ್ಲವನ್ನು ಮನಸ್ಸಿನಲ್ಲೇ ಗಟ್ಟಿ ಮಾಡಿಕೊಂಡು ಬಲಿಯೇಂದ್ರನನ್ನು ಹೇಗೆ ಸಿಂಗಾರಮಾಡಬೇಕು ಎಂಬ ವಾದ-ವಿವಾದ ವಾಗ್ವಾದೊಂದಿಗೆ ನಮ್ಮ ಬಹುದೊಡ್ಡ ಆಚರಣೆಯ ದೀಪಾವಳಿ ಹಬ್ಬಕ್ಕೆ ಸಿದ್ಧತೆಗಳು ನಡೆಯುತ್ತಿದ್ದವು.WD ಕಾಡಿನಿಂದ ಹಾಲೆಮರವನ್ನು ದೀಪಾವಳಿ ಅಮವಾಸ್ಯೆಯಂದು ಬೆಳಗ್ಗೆ ಅಪ್ಪ ಕಡಿದು ತರುತ್ತಿದ್ದರು. ಇದನ್ನು