ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.ಇಂದು (ಶುಕ್ರವಾರ) ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನೂರಾರು ಮಹಿಳಾ ಕಾರ್ಯಕರ್ತರನ್ನು ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸಿ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ದಿನಾಂಕ ಘೋಷಣೆಯಾದ ಎರಡು ದಿನಗಳಲ್ಲಿ ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗುವುದು. ಹಾಗೆಯೇ ಮಹಿಳೆಯರಿಗೆ ಹೆಚ್ಚಿನ ಟಿಕೆಟ್ ನೀಡಲಾಗುವುದು ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಪ್ರಕಟಿಸಿರುವ