ಗ್ರಾಮೀಣ ಮಟ್ಟದಲ್ಲಿ ಸಮಾಜ ಸುಧಾರಣೆಯಲ್ಲಿ ಪಾಲ್ಗೊಳ್ಳುವ ಸ್ವಾಮೀಜಿಗಳನ್ನು ವಿಧಾನ ಪರಿಷತ್ನಲ್ಲಿ ಸ್ಥಾನ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.ಸಿದ್ದರಾಮೇಶ್ವರ ಡಿಇಡಿ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ, ಪ್ರಾಥಮಿಕ ಮತ್ತು ಪ್ರೌಢಶಾಲೆ ಕಟ್ಟಡ ಶಿಲಾನ್ಯಾಸ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.ಶೈಕ್ಷಣಿಕವಾಗಿ ಮುಂದೆ ಬರಲು ಹಾಗೂ ಕೆಳಮಟ್ಟದಿಂದ ಮೇಲೆ ಬರುತ್ತಿರುವ ಮಠಗಳಿಗೆ ಒತ್ತು ನೀಡುವ ಕೆಲಸವನ್ನು ಸ್ವಾಮೀಜಿಗಳು ಮಾಡುತ್ತಾರೆ. ಅಲ್ಲದೆ, ಸಮಾಜವನ್ನು ಮೇಲೆತ್ತುವ ಕಾರ್ಯದಲ್ಲಿ ಸ್ವಾಮೀಜಿಗಳ ಪಾತ್ರ ಅಪಾರ. ಈ ನಿಟ್ಟಿನಲ್ಲಿ