ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಹೊಂದಾಣಿಕೆಗೆ ಪ್ರಯತ್ನಿಸಿ ಕಾದು ಸುಸ್ತಾದ ಸಂಯುಕ್ತ ಜನತಾದಳ ಇದೀಗ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಪಕ್ಷದ ರಾಜ್ಯಾಧ್ಯಕ್ಷ ಬಿ. ಸೋಮಶೇಖರ್ ಮಳವಳ್ಳಿ ಮೀಸಲು ಕ್ಷೇತ್ರದಿಂದ, ಮಾಜಿ ಶಾಸಕ ಮಾದುಸ್ವಾಮಿ ಚಿಕ್ಕನಾಯಕನಹಳ್ಳಿಯಿಂದ, ಮಾಜಿ ಶಾಸಕ ಮೈಕೇಲ್ ಫರ್ನಾಂಡೀಸ್ ಸರ್ವಜ್ಞನಗರ, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್. ಬೊಮ್ಮಾಯಿ ಅವರ ಪುತ್ರ ಮಲ್ಲಿಕಾರ್ಜುನ ಬೊಮ್ಮಾಯಿ ಹೆಬ್ಬಾಳ ಕ್ಷೇತ್ರದಿಂದ, ಮಾಜಿ ಸಚಿವ ಸಿ. ವೀರಣ್ಣ ಮಧುಗಿರಿಯಿಂದ