ಬಳ್ಳಾರಿ ಗಣಿ ಮಾಲೀಕರು ನಡೆಸುತ್ತಿರುವ ಚುನಾವಣಾ ಗಲಭೆಗೆ ಕಡಿವಾಣ ಹಾಕುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ಇಂದು ಇಲ್ಲಿನ ರಾಜರಾಜೇಶ್ವರಿ ದೇವಾಲಯದಲ್ಲಿ ತಮ್ಮ ಕುಟುಂಬ ವರ್ಗದೊಂದಿಗೆ ಹಮ್ಮಿಕೊಂಡಿದ್ದ ಚಂಡಿಕಾಯಾಗದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಗಣಿ ಮಾಲೀಕರ ಅಬ್ಬರದಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ ಎಂದರು. ಗಲಭೆಗೆ ಕಾರಣಕರ್ತರಾದ ಅಭ್ಯರ್ಥಿಗಳಿಗೆ ಮತ್ತು ಅಂತಹ ಅಭ್ಯರ್ಥಿಗಳನ್ನು ಬೆಂಬಲಿಸುವ ಪಕ್ಷಗಳಿಗೆ ಮತ ಹಾಕದಂತೆ ಸಾರ್ವಜನಿಕರಲ್ಲಿ ಮನವಿ ಮಾಡುವುದಾಗಿ