ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದು ಈ ಸಂಬಂಧ ನಾಮಪತ್ರ ಸಲ್ಲಿಸಿದ್ದಾರೆ.ಇಲ್ಲಿನ ಜ್ಯೂನಿಯರ್ ಕಾಲೇಜು ಮೈದಾನದಿಂದ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಟು ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿಯವರೊಟ್ಟಿಗೆ ಎಚ್.ಸಿ.ಬಾಲಕೃಷ್ಣ ಸೇರಿದಂತೆ ನಗರಸಭೆ ಅಧ್ಯಕ್ಷರು, ಸದಸ್ಯರು, ಸಾವಿರಾರು ಮುಖಂಡರು ಇದ್ದುದು ವಿಶೇಷವಾಗಿತ್ತು.ಇವರಿಗೆದುರಾಗಿ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಸ್ಪರ್ಧಿಸಲು ಬಯಸಿದ್ದಾರೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಅವರ ಹೆಸರು ಇಲ್ಲವಾದರೂ ಅದು ತಮಗೇ ಒಲಿಯುವುದು