ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರವನ್ನು ಪಡೆಯಲು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಕ್ಕೆ ಕರೆಸಿಕೊಂಡಿದೆ. ಇಂದು (ಭಾನುವಾರ) ಪುತ್ತೂರಿನಲ್ಲಿ ಏರ್ಪಡಿಸಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ನರೇಂದ್ರ ಮೋದಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈಗಾಗಲೇ ನಗರದಲ್ಲಿ ನಾಯಕರ ಬಟಿಂಗ್ಸ್, ಕಟೌಟ್ ರಾರಾಜಿಸುತ್ತಿದೆ. ರಾಜ್ಯ ಚುನಾವಣೆಯಲ್ಲಿ ಬಿಜೆಪಿಯನ್ನು ಸರ್ವವಿಧದಲ್ಲೂ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಹರಸಾಹಸ ನಡೆಸಿರುವ ಬಿಜೆಪಿ ಮುಖಂಡರು ಮೋದಿ ಮೂಲಕ ಜನರಿಗೆ ಮೋಡಿ ಮಾಡಲು