ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ವಿತ್ತಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರು ಮಾಡಿರುವ ಸಾಧನೆಯೇ ಬಿಜೆಪಿಗೆ ಮುಂದಿನ ದಿನಗಳಲ್ಲಿ ಶ್ರೀರಕ್ಷೆಯಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅಭಿಪ್ರಾಯ ಪಟ್ಟಿದ್ದಾರೆ.
ಭಾನುವಾರ ನಗರದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ಯಡಿಯೂರಪ್ಪನವರು ರಾಜ್ಯದ ಏಳಿಗೆಗಾಗಿ ಶ್ರಮಿಸಿದ್ದಾರೆ. ಈ ಮೂಲಕ ರಾಜ್ಯದ ಜನತೆಯ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಏಕೈಕ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮತದಾರರು ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಂದ ಬೇಸತ್ತು ಹೋಗಿರುವುದರಿಂದ ಮುಂದಿನ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಈ ಎರಡೂ ಪಕ್ಷಗಳು ಸ್ಪರ್ಧೆಗೆ ಬರುವುದಿಲ್ಲ. ಬಿಜೆಪಿ ನಿಶ್ಚಲ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಅವರು ತಿಳಿಸಿದರು.
|