ಮುಖ್ಯ ಪುಟ > ವಿವಿಧ > ವೆಬ್‌ದುನಿಯಾ ವಿಶೇಷ 08 > ಚುನಾವಣೆ-08
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಂಗಾರಪ್ಪ ಸೋಲು, ಯಡಿಯೂರಪ್ಪ ವಿಜಯ, ಕುಮಾರಸ್ವಾಮಿ ಮುನ್ನಡೆ, ಲಾಡ್,  Search similar articles
ಕ್ಷಣಕ್ಷಣಕ್ಕೂ ಕುತೂಹಲ ಮೂಡಿಸಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾರೆಯಾಗಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಎಲ್ಲರ ಕುತೂಹಲ ಕೆರಳಿಸಿರುವ ಶಿವಮೊಗ್ಗದ ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪನವರು ವಿಜಯ ಗಳಿಸಿದ್ದಾರೆ. ಈ ಮೂಲಕ ಎದುರಾಳಿ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್, ಜೆಡಿಎಸ್ ಬೆಂಬಲಿತ ಸಮಾಜವಾದಿ ಪಕ್ಷದ ಅಭ್ಯರ್ಥಿ ಬಂಗಾರಪ್ಪನವರಿಗೆ ತೀವ್ರ ಮುಖಭಂಗ ಉಂಟಾಗಿದೆ.

ಹರಪನಹಳ್ಳಿಯಲ್ಲಿ ಎಂ.ಪಿ. ಪ್ರಕಾಶ್ ಸುಮಾರು 6ಸಾವಿರ ಮತಗಳಿಂದ ಭಾರಿ ಹಿನ್ನಡೆ ಅನುಭವಿಸಿದ್ದಾರೆ. ಕಡೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ವೈ.ಎಸ್.ವಿ. ದತ್ತಾ ಹಿನ್ನಡೆ ಅನುಭವಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಭಾರಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಲಾಡ್ ಭಾರಿ ಹಿನ್ನಡೆ ಅನುಭವಿಸಿದ್ದಾರೆ. ಗುಲ್ಬರ್ಗಾದಲ್ಲಿ ಮಲ್ಲಿಕಾರ್ಜುನ್ ಖರ್ಗೆ ಮೂರನೆ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ ಸುಮಾರು 15 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಪದ್ಮನಾಭನಗರದಲ್ಲಿ ಆರ್. ಅಶೋಕ್ ಮುನ್ನಡೆ ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎಚ್.ಡಿ. ರೇವಣ್ಣ ಭಾರಿ ಮುನ್ನಡೆ ಸಾಧಿಸಿದ್ದಾರೆ. ಜೆಡಿಎಸ್ನ ಚೆಲುವರಾಯಸ್ವಾಮಿ ಹಿನ್ನಡೆ ಅನುಭವಿಸಿದ್ದಾರೆ. ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್ ಮುನ್ನಡೆ ಸಾಧಿಸಿದ್ದಾರೆ.

ತಾರೆಯರಿಗೆ ಹಿನ್ನಡೆ: ಕಣಕ್ಕಿಳಿದಿರುವ ಚಿತ್ರನಟ ನಟಿಯರು ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಉಮಾಶ್ರೀ ಹಾಗೂ ಶ್ರೀರಂಗಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಅಂಬರೀಷ್ ಭಾರಿ ಹಿನ್ನಡೆ ಅನುಭವಿಸಿದ್ದಾರೆ. ತುರುವೇಕೆರೆ ಅಭ್ಯರ್ಥಿ ನಟ ಜಗ್ಗೇಶ್ ಹಿನ್ನಡೆ ಅನುಭವಿಸಿದ್ದಾರೆ.

ಈಗಿನ ಬಲಾಬಲ:
ಬಿಜೆಪಿ-100
ಕಾಂಗ್ರೆಸ್-71
ಜೆಡಿಎಸ್-38
ಇತರೆ-7
ಮತ್ತಷ್ಟು
ಮತ ಎಣಿಕೆಗೆ ಕ್ಷಣಗಣನೆ; ಜನತೆಯಲ್ಲಿ ಕಾತರ
ವೆಬ್ ದುನಿಯಾದಲ್ಲಿ ತಾಜಾತಾಜಾ ಫಲಿತಾಂಶ
ಜೆಡಿಎಸ್-ಜೆಡಿಯು ವೀಲೀನ?
4 ಮತಗಟ್ಟೆಗಳಲ್ಲಿ ಮರುಮತದಾನ
ಮತ ಎಣಿಕೆಯತ್ತ ಎಲ್ಲರ ಚಿತ್ತ
ಮತ್ತೊಮ್ಮೆ ರಾಜ್ಯದಲ್ಲಿ ಅತಂತ್ರ ಸರಕಾರ?