ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹುಮ್ನಾಬಾದ್‌ನಲ್ಲಿ ಸೋಲನ್ನನುಭವಿಸಿದ ಜೆಡಿಎಸ್ ಮೆರಾಜುದ್ದೀನ್ ಪಟೇಲ್ ತಮ್ಮ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಮಾದ್ಯಮದೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ನನ್ನ ಸ್ವಂತ ನಿರ್ಧಾರದಿಂದಾಗಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದರು.
ಹಣ ಮತ್ತು ಹೆಂಡದಿಂದಾಗಿ ಬಿಜೆಪಿ ಜಯ ಗಳಿಸಿದೆ ಎಂದು ಅವರು ಆರೋಪಿಸಿದರು.
ಠೇವಣಿ ಕಳೆದುಕೊಂಡ ವಾಟಾಳ್ ನಾಗರಾಜ್: ಚಾಮರಾಜನಗರದಿಂದ ಕಣಕ್ಕಿಳಿದಿದ್ದ ವಾಟಾಳ್ ನಾಗರಾಜ್ ಹೀನಾಯ ಸೋಲನ್ನು ಅನುಭವಿಸಿದ್ದರಲ್ಲದೆ, ಠೇವಣಿಯನ್ನು ಕಳೆದುಕೊಂಡಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪುಟ್ಟರಂಗಸ್ವಾಮಿ ಗೆಲುವನ್ನು ಸಾಧಿಸಿದ್ದಾರೆ.
ಗೆದ್ದವರು: ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ನಟ ಜಗ್ಗೇಶ್ ಗಾಂಧಿನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಶಿವಾಜಿನಗರದಲ್ಲಿ ಕಾಂಗ್ರೆಸ್ ರೋಷನ್ ಬೇಗ್ ಚಿತ್ತಾಪುರದಲ್ಲಿ ಮಲ್ಲಿಕಾರ್ಜುನ್ ಖರ್ಗೆ ಹಾನಗಲ್ನಲ್ಲಿ ಕಾಂಗ್ರೆಸ್ನ ಸಿ.ಎಂ. ಉದಾಸಿ ಮಂಗಳೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿ ಯೋಗಿಶ್ ಭಟ್ ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್
|