ಅವಿನಾಶ್ ಬಿ. PTI ಮುಗಿಯಿತು ಎಂಬ ಉದ್ಗಾರವೇ ಹೊಸದೊಂದು ಆರಂಭದ ಮುನ್ಸೂಚನೆ. ಮೊನ್ನೆ ಮೊನ್ನೆಯಷ್ಟೇ ಮನೆಯ ಗೋಡೆಯಲ್ಲಿದ್ದ ಕ್ಯಾಲೆಂಡರ್ ಬದಲಾಯಿಸಿದ್ದವಲ್ಲ...? ಇಷ್ಟು ಬೇಗ ಕಳೆದು ಹೋಯಿತೇ ಈ ಒಂದು ವರ್ಷ? ಅಬ್ಬ, ಹೇಗಾದ್ರೂ ಮುಗೀತು. ಇಷ್ಟೊಂದು ದುರಂತಮಯ ವರ್ಷ ಇದುವರೆಗೆ ಕಂಡಿಲ್ಲ ಅನ್ನೋ ಭಾವನೆ ಸುಳಿದು ಮಾಯವಾಗುತ್ತದೆ. ಬಹುಶಃ ಇದು ಪ್ರತಿಯೊಬ್ಬರನ್ನೂ ಪ್ರತಿ ವರ್ಷವೂ ಕಾಡುವ ಸಂಗತಿ ಎಂಬುದೇ ವಿಶೇಷ. ನೋವಿಗೆ ಕೊನೆಯಿಲ್ಲ ಹೇಗೆಯೋ, ಹಾಗೆಯೇ ನಲಿವಿಗೂ ಕೂಡ. ನೋವಿನ