ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಚೇತರಿಕೆ (Rupee | Dollar | Trade | Sensex | Capital inflows)
Bookmark and Share Feedback Print
 
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 7 ಪೈಸೆ ಏರಿಕೆಯಾಗಿ 46.65 ರೂಪಾಯಿಗಳಿಗೆ ತಲುಪಿದೆ.

ಏಷ್ಯಾ ಕರೆನ್ಸಿಗಳ ಚೇತರಿಕೆ ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ ಎದುರಿಗೆ 8 ಪೈಸೆ ಏರಿಕೆ ಕಂಡು 46.72/73 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 7 ಪೈಸೆ ಏರಿಕೆಯಾಗಿ 46.65 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 78.01ಪಾಯಿಂಟ್‌ಗಳಿಗೆ ಏರಿಕೆ ಕಂಡು 18,316.32 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ