ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಬ್ಯಾಂಕಿಂಗ್, ರಿಯಲ್ಟಿ ವಹಿವಾಟು ಹೆಚ್ಚಳದಿಂದ ಸೂಚ್ಯಂಕ ಏರಿಕೆ (Stock market | Sensex | Nifty)
Bookmark and Share Feedback Print
 
ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನ ಮುಕ್ತಾಯಕ್ಕೆ 217 ಪಾಯಿಂಟ್‌ಗಳ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 151.42 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ-30 ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 217.08 ಪಾಯಿಂಟ್‌ಗಳ ಏರಿಕೆ ಕಂಡು 19,897.22 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 56.45 ಪಾಯಿಂಟ್‌ಗಳ ಏರಿಕೆ ಕಂಡು 5,948.75 ಅಂಕಗಳಿಗೆ ತಲುಪಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರಗಳ ಹೆಚ್ಚಳಕ್ಕೆ ನಿರಾಕರಿಸಿದ್ದರಿಂದ, ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಸೇರಿದಂತೆ ಇತರ ಬ್ಯಾಂಕಿಂಗ್ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.

ರಿಯಲ್ಟಿ ಕ್ಷೇತ್ರದ ಶೇರುಗಳು ಕೂಡಾ ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದು, ಡಿಎಲ್‌ಎಫ್, ಯುನಿಟೆಕ್ ಶೇರುಗಳು ವಹಿವಾಟಿನಲ್ಲಿ ಏರಿಕೆ ಕಂಡಿವೆ.

ಟಾಟಾ ಸ್ಟೀಲ್ ಮತ್ತು ಸ್ಟೆರ್ಲೈಟ್ ರಿಲಯನ್ಸ್ ಇಂಡಸ್ಟ್ರೀಸ್, ಒಎನ್‌ಜಿಸಿ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶೇರುಪೇಟೆ, ಸೂಚ್ಯಂಕ, ನಿಫ್ಟಿ