ನಿಯೋಜಿತ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ತಾನು ಇಷ್ಟಪಡುವುದಾಗಿ ಅಮೆರಿಕದ ಹಾಲಿ ಅಧ್ಯಕ್ಷ ಜಾರ್ಜ್ ಡಬ್ಲ್ಯು ಬುಷ್ ಅವರು ಭಾನುವಾರ ಸಂದರ್ಶನವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಮೆರಿಕದ ನಿಯೋಜಿತ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಒಬಾಮ ಕುರಿತು ಪೋಕ್ಸ್ ನ್ಯೂಸ್ ಸಂದರ್ಶನದ ವೇಳೆ ಪ್ರಶ್ನಿಸಿದಾಗ ಈ ರೀತಿಯಾಗಿ ತಿಳಿಸಿದ್ದಾರೆ.
ಜಾರ್ಜ್ ಬುಷ್ ಅವರ ಅಧಿಕಾರವಧಿ ಜನವರಿ 20ಕ್ಕೆ ಕೊನೆಗೊಳ್ಳಲಿದ್ದು, ಅದೇ ದಿನ ನಿಯೋಜಿತ ಅಧ್ಯಕ್ಷರಾಗಿರುವ ಬರಾಕ್ ಒಬಾಮ ಅವರು ಅಧಿಕಾರದ ಗದ್ದುಗೆ ಏರಲಿದ್ದಾರೆ.
ಒಬಾಮ ಅವರದ್ದು ಆಕರ್ಷಕ ವ್ಯಕ್ತಿತ್ವ, ತಾನು ಅವರನ್ನು ಇಷ್ಟಪಡುವುದಾಗಿ ಹೇಳಿದ ಬುಷ್, ಬರಾಕ್ ಆಡಳಿತ ನಡೆಸುವ ಸಾಮರ್ಥ್ಯ ಹೊಂದಿದ್ದು, ಜನರು ಅವರ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದರು.
|