ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಫಿಜಿಯಲ್ಲಿ ಪ್ರವಾಹವುಂಟಾಗಿದ್ದು, ಇದುವರೆಗೆ ಆರು ಮಂದಿ ಬಲಿಯಾಗಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಂದ ರಕ್ಷಣಾ ಕಾರ್ಯಕರ್ತರು ಸಾವಿರಾರು ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ತೀವ್ರತೆಯನ್ನು ಪಡೆಯಬಹುದು ಎಂದು ಅಧಿಕಾರಿಗಳು ಮುನ್ನಚ್ಚೆರಿಕೆ ನೀಡಿದ್ದಾರೆ. |