ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಅಫ್ಘಾನ್: ಸ್ಮಶಾನವಾದ ಮದುವೆ ಪಾರ್ಟಿ-ಬಾಂಬ್ ದಾಳಿಗೆ 40 ಬಲಿ (Suicide bomber | Afghan wedding | Kandahar | police)
Bookmark and Share Feedback Print
 
ಮದುವೆ ಸಮಾರಂಭವೊಂದರಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿದ ಪರಿಣಾಮ ಸುಮಾರು 40 ಮಂದಿ ಸಾವನ್ನಪ್ಪಿದ್ದು, 70ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ದಕ್ಷಿಣ ಅಫ್ಘಾನಿಸ್ತಾನದಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬುಧವಾರ ರಾತ್ರಿ ಉತ್ತರ ಕಂದಾಹಾರ್‌ನ ಅರ್ಗಾನ್‌ದಾಬ್ ಜಿಲ್ಲೆಯಲ್ಲಿ ನೂರಾರು ಮಂದಿ ಮದುವೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಆತ್ಮಹತ್ಯಾ ಬಾಂಬರ್ ಏಕಾಏಕಿ ಒಳನುಗ್ಗಿ ತನ್ನನ್ನು ತಾನೇ ಸ್ಫೋಟಿಸಿಕೊಂಡಿದ್ದರ ಪರಿಣಾಮ ಈ ಘಟನೆ ಸಂಭವಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಸಮಾರಂಭದಲ್ಲಿ ಪಾಲ್ಗೊಂಡಿದ್ದ ಹಲವು ಅತಿಥಿಗಳು ಸ್ಥಳೀಯ ಪೊಲೀಸ್ ಅಥವಾ ಸ್ಥಳೀಯ ಉಗ್ರರ ಜೊತೆ ಸಂಪರ್ಕ ಹೊಂದಿದವರಾಗಿದ್ದಾರೆ ಎಂದು ಕಂದಾಹಾರ್ ಪೊಲೀಸರು ತಿಳಿಸಿದ್ದು, ಆದರೆ ತಾಲಿಬಾನ್ ಉಗ್ರರು ಅವರನ್ನು ಯಾಕೆ ಗುರಿಯಾಗಿಸಿ ದಾಳಿ ನಡೆಸಿದ್ದಾರೆ ಎಂಬುದಾಗಿ ಪ್ರಶ್ನಿಸಿದ್ದಾರೆ.

ಘಟನೆ ನಡೆದ ಕೂಡಲೇ ಗಾಬರಿಗೊಂಡ ಅತಿಥಿಗಳು ಸಮಾರಂಭದ ಮೇಲೆ ವೈಮಾನಿಕ ದಾಳಿ ನಡೆಸಲಾಗಿದೆ ಎಂದು ತಪ್ಪಾಗಿ ತಿಳಿದುಕೊಂಡು ದಿಕ್ಕಾಪಾಲಾಗಿ ಓಡಿ ಹೋಗಿದ್ದರು ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಘಟನೆ ಕುರಿತಂತೆ ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದು, ಸ್ಥಳೀಯ ಪೊಲೀಸರ ನೆರವಿನೊಂದಿಗೆ ಆರೋಪಿಗಳನ್ನು ಪತ್ತೆ ಹಚ್ಚುವುದಾಗಿ ನ್ಯಾಟೋ ವಕ್ತಾರರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ